ಪಾವಗಡ: ತಾಲೂಕು ವೆಂಕಟಾಪುರ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ರಾಧಮ್ಮರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.
ಅಧ್ಯಕ್ಷರ ಸ್ಥಾನಕ್ಕೆ ಅಭ್ಯರ್ಥಿಯಾಗಿ ವೆಂಕಟರಮಣಪ್ಪ ಉಪಾಧ್ಯಕ್ಷರ ಸ್ಥಾನಕ್ಕೆ ವರಲಕ್ಷ್ಮಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಅಧಿಕಾರಿಯಾಗಿ ಗ್ರೇಡ್ 2 ತಹಸೀಲ್ದಾರ್ ಚಂದ್ರಶೇಖರ್ ರವರು ಕಾರ್ಯನಿರ್ವಹಿಸಿದರು. ಒಟ್ಟು 12 ಜನ ಸದಸ್ಯರಿದ್ದು, ಕಾಂಗ್ರೆಸ್ ಆರು ಜೆಡಿಎಸ್ ಐದು ಹಾಗೂ ಬಿಜೆಪಿ ಒಬ್ಬರು ಸದಸ್ಯರಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಆರು ಬಿಜೆಪಿ ಒಂದು ಜೆಡಿಎಸ್ ಒಬ್ಬ ಸದಸ್ಯರು ಇದ್ದರು. ಜೆಡಿಎಸ್ ನ ನಾಲ್ಕು ಜನ ಸದಸ್ಯರು ಗೈರು ಹಾಜರಾಗಿದ್ದರು.
ಈ ಸಂದರ್ಭದಲ್ಲಿ ಮುಖಂಡರಾದ ಮಾಜಿ ಅಧ್ಯಕ್ಷರಾದ ಅಂಜಿ ಗೌಡ ನಾರಾಯಣಪ್ಪ, ವೆಂಕಟೇಶ್, ರಂಜಿತ್ ಯು, ನರಸಿಂಹಪ್ಪ, ಶಂಕರಪ್ಪ, ವರ್ದರಾಜುಲು. ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx