ಬಾಗಲಕೋಟೆ: ಕಾಂಗ್ರೆಸ್ ಮುಖಂಡನೊಬ್ಬರು ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿರುವ ಘಟನೆ ಬಾಗಲಕೋಟೆ ತಾಲೂಕಿನ ಹವೇಲಿ ಗ್ರಾಮದಲ್ಲಿ ನಡೆದಿದೆ. ಹಳೆ ಹವೇಲಿ ಗ್ರಾಮದ ಕಾಂಗ್ರೆಸ್ ಮುಖಂಡ ರಮೇಶ್ ರಾಠೋಡ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ಸಾಂಗ್ ಹಾಕಿ ಕಾಂಗ್ರೆಸ್ ಮುಖಂಡ ಕೇಕ್ ಕಟ್ ಮಾಡಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ತಲ್ವಾರ್ ನಿಂದ ಕೇಕ್ ಕತ್ತರಿಸಿದ ಮುಖಂಡನಿಗೆ ಬೆಂಬಲಿಗರು ಸನ್ಮಾನ ಮಾಡಿದ್ದಾರೆ. ಲೈಸೆನ್ಸ್ ಇಲ್ಲದೇ ಮಾರಕಾಸ್ತ್ರ ಹೊಂದುವುದು, ಸಾರ್ವಜನಿಕವಾಗಿ ಮಾರಕಾಸ್ತ್ರ ಬಳಸುವುದು ಕಾನೂನು ಪ್ರಕಾರ ಅಪರಾಧ. ಹೀಗಾಗಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


