ಗೃಹ ಸಚಿವ ಜಿ ಪರಮೇಶ್ವರ್ ಆಪ್ತ, ಕಾಂಗ್ರೆಸ್ ಮುಖಂಡ ಎಂ. ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳಾದ ವೇಣುಗೋಪಾಲ್, ಮನೀಂದ್ರ ಕಾಲಿಗೆ ವೇಮಗಲ್ ಠಾಣೆ ಇನ್ಸ್ ಪೆಕ್ಟರ್ ವೆಂಕಟೇಶ್ ಫೈರಿಂಗ್ ಮಾಡಿದ್ದಾರೆ. ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಸಂತೋಷ್ ಗೂ ಗಾಯವಾಗಿದೆ.
ಬಂಧಿಸಿ ಕರೆತರುವ ವೇಳೆ ಆರೋಪಿಗಳು ಪೊಲೀಸ್ ಸಿಬ್ಬಂದಿ ಮಂಜುನಾಥ್, ನಾಗೇಶ್ ಮೇಲೆ ಹಲ್ಲೆ ಮಾಡಲು ಯತ್ನಿಸಿದರು. ಈ ವೇಳೆ ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಲಾಗಿದೆ.


