ನವದೆಹಲಿ: ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನಲ್ಲಿ ಎಫ್ ಐಆರ್ ದಾಖಲಾಗಿದೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಕಾಂಗ್ರೆಸ್ ಒತ್ತಾಯಿಸಿದೆ.
ಕಾಂಗ್ರೆಸ್ ವಕ್ತಾರ, ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯು ಪ್ರಜಾಪ್ರಭುತ್ವವನ್ನು ಕಡೆಗಣಿಸಿದೆ. ಇಬಿಎಸ್ (ಎಲೆಕ್ಟೋರಲ್ ಬಾಂಡ್ ಸ್ಕೀಮ್) ಎಂದರೆ, ಎಕ್ಸ್ ಟಾರ್ಷನ್ ಬಿಜೆಪಿ ಸ್ಕೀಮ್ (ಬಿಜೆಪಿಯ ಸುಲಿಗೆ ಯೋಜನೆ) ಎಂದು ಅಭಿಷೇಕ್ ಮನು ಸಿಂಘ್ವಿ ಲೇವಡಿ ಮಾಡಿದರು.
ಚುನಾವಣಾ ಬಾಂಡ್ಗಳ ಮೂಲಕ ನಾಲ್ಕು ರೀತಿಯಲ್ಲಿ ಸುಲಿಗೆ ಮಾಡುವ ಪಿತೂರಿ ಮಾಡಲಾಗಿತ್ತು. ಅವುಗಳೆಂದರೆ: ಅನುಕೂಲ ಮಾಡಿಕೊಡುವ ಮುಂಚೆ ಮಾಡುವ ಸುಲಿಗೆ, ಅನುಕೂಲ ಮಾಡಿಕೊಟ್ಟ ಮೇಲೆ ಸುಲಿಗೆ ಮಾಡುವುದು, ಇ.ಡಿ, ಐ.ಟಿ ದಾಳಿಗೂ ಮುನ್ನ ಮಾಡುವ ಸುಲಿಗೆ, ನಕಲಿ ಕಂಪನಿಗಳ ಮೂಲಕ ಮಾಡುವ ಸುಲಿಗೆ. ಹೀಗೆ ವಿವಿಧ ರೀತಿಯಲ್ಲಿ ಉದ್ಯಮಿಗಳಿಂದ ಸುಲಿಗೆ ಮಾಡಲಾಗಿದೆ ಎಂದು ಜೈರಾಮ್ ರಮೇಶ್ ಹೇಳಿದರು.
ಈ ಯೋಜನೆ ಕುರಿತು ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಯಬೇಕು ಎಂದು ನಾವು ಬಹಳ ಹಿಂದಿನಿಂದಲೇ ಆಗ್ರಹಿಸಿದ್ದೇವೆ. ಈಗಲೂ ಇದೇ ರೀತಿಯ ಒತ್ತಾಯ ಮಾಡುತ್ತೇವೆ. ಬೆಂಗಳೂರಿನಲ್ಲಿ ದಾಖಲಾದ ದೂರಿಗೂ ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ’ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296