nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ

    May 5, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್‌ ನಾಯಕರಿಗೆ ಬರ ಪರಿಹಾರ ತರಲು ಯೋಗ್ಯತೆ ಇಲ್ಲವಾದರೆ ರಾಜೀನಾಮೆ ಕೊಟ್ಟು ಹೋಗಲಿ: ಆರ್‌. ಅಶೋಕ್‌
    ರಾಜ್ಯ ಸುದ್ದಿ March 10, 2024

    ಕಾಂಗ್ರೆಸ್‌ ನಾಯಕರಿಗೆ ಬರ ಪರಿಹಾರ ತರಲು ಯೋಗ್ಯತೆ ಇಲ್ಲವಾದರೆ ರಾಜೀನಾಮೆ ಕೊಟ್ಟು ಹೋಗಲಿ: ಆರ್‌. ಅಶೋಕ್‌

    By adminMarch 10, 2024No Comments2 Mins Read
    r ashok

    ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕುಡಿಯುವ ನೀರಿಗೆ ತತ್ವಾರ ಇದೆ. ಕಾಂಗ್ರೆಸ್‌ ಸರ್ಕಾರ ಚುನಾವಣೆಯ ಹೊಂದಾಣಿಕೆಗಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಈ ಪಾಪರ್‌ ಸರ್ಕಾರದ ಬಳಿ ಬರ ಪರಿಹಾರ ನೀಡಲು ಹಣವಿಲ್ಲ. ಆದರೆ, ನೀರನ್ನು ಮಾತ್ರ ನೀಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಆರ್.‌ ಅಶೋಕ್‌, ರಾಜ್ಯ ಕಾಂಗ್ರೆಸ್‌ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರನ್ನು ಹರಿಸಿದೆ. ರೈತರು ಹೋರಾಟ ಮಾಡುತ್ತಿದ್ದಾರೆ. ಜನರು ಖಾಲಿ ಬಿಂದಿಗೆ ಹಿಡಿದುಕೊಂಡು ಬೀದಿಗಿಳಿದಿದ್ದಾರೆ.


    Provided by
    Provided by

    ಬೆಂಗಳೂರಿನಲ್ಲಿ ನೀರಿಗೆ ಕೊರತೆಯಾಗಿದೆ. ಇಷ್ಟಾದರೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಾರೆ ಎಂದರೆ ಇಂತಹ ನಾಚಿಕೆಗೆಟ್ಟ ಸರ್ಕಾರ ಇತಿಹಾಸದಲ್ಲೇ ಇಲ್ಲ ಎನ್ನಬೇಕು. ನಮ್ಮ ಕುಡಿಯುವ ನೀರನ್ನು ಚುನಾವಣಾ ಹೊಂದಾಣಿಕೆಗಾಗಿ ಬಿಟ್ಟುಕೊಡುತ್ತಾರೆ. ಈಗಾಗಲೇ ಮತಕ್ಕಾಗಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡಿದ್ದಾರೆ. ಈಗ ಹೊಂದಾಣಿಕೆಗಾಗಿ ರಾಜ್ಯಕ್ಕೆ ಕಾಂಗ್ರೆಸ್‌ ದ್ರೋಹ ಬಗೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆಂದು ಹೋರಾಟ ಮಾಡಿ, ಈಗ ಕೇಂದ್ರ ಸರ್ಕಾರ ಮಾಡಬೇಕು ಎನ್ನುತ್ತಿದ್ದಾರೆ. ಆಯವ್ಯಯದಲ್ಲಿ ಮೇಕೆದಾಟು ಯೋಜನೆಗೆ ನಯಾ ಪೈಸೆ ನೀಡಿಲ್ಲ. ಇವರಿಗೆ ಮಾನವಿದ್ದರೆ 10 ಸಾವಿರ ಕೋಟಿ ರೂಪಾಯಿಯನ್ನು ಈ ಯೋಜನೆಗೆ ಮೀಸಲಿಡಬೇಕಿತ್ತು. ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಮಾನವನ್ನು ತೆಗೆದಿದ್ದು, ಜನರಿಗೆ ಕಲುಷಿತ ನೀರು ನೀಡಲಾಗುತ್ತಿದೆ. ಖಜಾನೆಯನ್ನು ಲೂಟಿ ಹೊಡೆಯುವುದರಲ್ಲಿ ಎಲ್ಲರೂ ನಿರತರಾಗಿದ್ದಾರೆ ಎಂದು ಅಶೋಕ್‌ ಹೇಳಿದರು.‌

    ಯೋಗ್ಯತೆ ಇಲ್ಲದಿದ್ದರೆ ಕುರ್ಚಿ ಬಿಟ್ಟು ತೊಲಗಿ

    ಕಾಂಗ್ರೆಸ್‌ ನಾಯಕರಿಗೆ ಬರ ಪರಿಹಾರ ತರಲು ಯೋಗ್ಯತೆ ಇಲ್ಲವಾದರೆ ರಾಜೀನಾಮೆ ಕೊಟ್ಟು ಹೋಗಲಿ. ನಾವು ಸರ್ಕಾರ ನಡೆಸುವಾಗ ಕೇಂದ್ರದ ಕಡೆ ನೋಡದೆ ರೈತರಿಗೆ ಪರಿಹಾರ ನೀಡಲಾಗಿತ್ತು. ಈಗಿನ ಸರ್ಕಾರ ಪಾಪರ್‌ ಆಗಿದ್ದು, ಕುಡಿಯುವ ನೀರಿಗೂ ಹಣವಿಲ್ಲ. ಕುಡಿಯುವ ನೀರು ಕೊಡುವ ಯೋಗ್ಯತೆ ಇಲ್ಲವಾದರೆ ಕುರ್ಚಿ ಬಿಟ್ಟು ತೊಲಗಲಿ ಎಂದು ಆರ್.‌ ಅಶೋಕ್ ಆಗ್ರಹಿಸಿದರು.

    ತೆಲಂಗಾಣ ಸಿಎಂ ಬಳಿ ಟ್ಯೂಶನ್‌ ಹೋಗಿ

    ಬರ ಪರಿಹಾರಕ್ಕೆ ಚುನಾವಣಾ ನೀತಿ ಸಂಹಿತೆ ಅನ್ವಯವಾಗುವುದಿಲ್ಲ. ಎಸ್‌ಡಿಆರ್‌ಎಫ್‌ ಹಣ ಈಗಾಗಲೇ ರಾಜ್ಯ ಸರ್ಕಾರಕ್ಕೆ ತಲುಪಿದೆ. ಎನ್‌ಡಿಆರ್‌ಎಫ್‌ ಹಣವನ್ನು ಕೇಂದ್ರ ಸರ್ಕಾರ ಒಟ್ಟಿಗೆ ತೀರ್ಮಾನ ಮಾಡಿ ಎಲ್ಲ ರಾಜ್ಯಗಳಿಗೆ ನೀಡುತ್ತದೆ. ಬಿಜೆಪಿ ಸರ್ಕಾರ ತಕ್ಷಣ ಪ್ರವಾಹ ಹಾನಿ ಪರಿಹಾರ ನೀಡಿದ್ದು, ಬಳಿಕ ಕೇಂದ್ರ ಸರ್ಕಾರ ಹಣ ನೀಡಿತ್ತು. ಮನಮೋಹನ್‌ ಸಿಂಗ್‌ ಸರ್ಕಾರವಿದ್ದಾಗ ಇದೇ ರೀತಿ ತಡವಾಗಿ ಪರಿಹಾರ ನೀಡಲಾಗಿತ್ತು. ಆಗ ಬಾಯಿ ಬಡಿದುಕೊಳ್ಳದ ಕಾಂಗ್ರೆಸ್‌, ಈಗ ಮಾತ್ರ ಬಾಯಿ ಬಡಿಯುತ್ತಿದೆ. ಕೇಂದ್ರದೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳದೆ ರಾಜಕೀಯ ಮಾಡುತ್ತಿದ್ದಾರೆ. ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿಯವರು ಪ್ರಧಾನಿಯ ಬಗ್ಗೆ ಉತ್ತಮವಾಗಿ ಮಾತನಾಡಿದ್ದಾರೆ. ಕರ್ನಾಟಕದ ಕಾಂಗ್ರೆಸ್‌ ನಾಯಕರು ಅವರ ಬಳಿ ಟ್ಯೂಶನ್‌ ಪಡೆಯಲಿ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026

    ಗುಬ್ಬಿ: ತಾಲೂಕು ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಬಸವಾದಿ ಶಿವಶರಣರ ವತಿಯಿಂದ ಮೇ 25ರಂದು ಪಟ್ಟಣದಲ್ಲಿ ಬಸವ ಜಯಂತಿ ಆಯೋಜನೆ…

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ

    May 5, 2026

    ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.