ಹಾವೇರಿ: ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ರೋಡ್ ಬ್ಯಾಡಗಿಯಲ್ಲಿ ಶೋದಲ್ಲಿ ಭಾಗವಹಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಮತ್ತು ಕಮಿಷನ್ ಎಂದರ್ಥ ಎಂದು ಲೇವಡಿ ಮಾಡಿದ ಅವರು, ಕುಟುಂಬ ರಾಜಕಾರಣ ಮತ್ತು ಭ್ರಷ್ಟರನ್ನು ರಕ್ಷಿಸಲು INDIA ಮೈತ್ರಿಕೂಟ ಮಾಡಿಕೊಳ್ಳಲಾಗಿದೆ ಎಂದು ಆರೋಪ ಮಾಡಿದರು.
ಬಿಜೆಪಿ ಅಧಿಕಾರಕ್ಕೆ ಬಂದರೆ ನಮ್ಮ ನಾಯಕ ಮೋದಿ ಪ್ರಧಾನಿಯಾಗುತ್ತಾರೆ ಎಂದು ನಾವು ಹೇಳುತ್ತೇವೆ. ಒಂದು ವೇಳೆ ವಿರೋಧ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಐದು ಪ್ರಧಾನಿಗಳು ಇರಲಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.
ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿ ಯಾರು? ಅವರಿಗೆ ಕೋವಿಡ್ ನಂತಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದ ನರೇಂದ್ರ ಮೋದಿ ಅವರಂತಹ ನಾಯಕರಿದ್ದಾರೆಯೇ? ಎಂದು ಪ್ರಶ್ನಿಸಿದ ಜೆಪಿ ನಡ್ಡಾ, ವಿಪಕ್ಷಗಳ ಮೈತ್ರಿಕೂಟ ಕೇವಲ ಅಧಿಕಾರಕ್ಕಾಗಿ, ಅವರು ನಿಮ್ಮೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ. ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ ರಕ್ಷಿಸುವ ಕಾರಣದಿಂದಾಗಿ ಅವರು ಮೈತ್ರಿಯಾಗಿದ್ದಾರೆ ಹೊರತು ಅವರಿಗೆ ಬೇರೆ ಯಾವುದೇ ಕೆಲಸವಿಲ್ಲ ಎಂದು ವಾಗ್ದಾಳಿ ನಡೆಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA