nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    • ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
    • ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ಯಾರಂಟಿ ಅನುಷ್ಠಾನ: ಕಾಂಗ್ರೆಸ್ ಸದಸ್ಯರ ಸಮಿತಿಗಳನ್ನು ರದ್ದುಗೊಳಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ
    ತುಮಕೂರು March 13, 2025

    ಗ್ಯಾರಂಟಿ ಅನುಷ್ಠಾನ: ಕಾಂಗ್ರೆಸ್ ಸದಸ್ಯರ ಸಮಿತಿಗಳನ್ನು ರದ್ದುಗೊಳಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

    By adminMarch 13, 2025No Comments1 Min Read
    siddaramaiah

    ಬೆಂಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗೆ ರಚಿಸಲಾದ ಕಾಂಗ್ರೆಸ್ ಸದಸ್ಯರ ಸಮಿತಿಗಳನ್ನು ರದ್ದುಗೊಳಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

    ಗ್ಯಾರಂಟಿ ಸಮಿತಿಗಳ ಅಧ್ಯಕ್ಷ ಹುದ್ದೆ ರದ್ದು ಮಾಡಿ, ಶಾಸಕರಿಗೆ ಜವಾಬ್ದಾರಿ ನೀಡಬೇಕು ಎಂದು ಒತ್ತಾಯಿಸಿ ವಿಧಾನಸಭೆಯಲ್ಲಿ ಎರಡು ದಿನಗಳಿಂದ ವಿರೋಧ ಪಕ್ಷಗಳ ನಡೆಸುತ್ತಿದ್ದ ಧರಣಿ ಹಾಗೂ ಹೋರಾಟಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

    ಯಾವುದೇ ಪಕ್ಷದ ಸರ್ಕಾರ ಇದ್ದಾಗ ಆ ಪಕ್ಷದ ಕಾರ್ಯಕರ್ತರಿಗೆ ಅವಕಾಶಗಳನ್ನು ಕೊಡುವುದು ಹಿಂದಿನಿಂದಲೂ ನಡೆದುಕೊಂಡೇ ಬಂದಿದೆ. ಮಹಾರಾಷ್ಟ್ರದಲ್ಲಿ ಸಚಿವರಿಗೆ ಆರ್ ಎಸ್ ಎಸ್ ಕಾರ್ಯಕರ್ತರನ್ನು ಆಪ್ತ ಸಹಾಯಕರನ್ನಾಗಿ ಮಾಡಿಲ್ಲವೇ? ಕೆಕೆಆರ್ ಡಿಬಿಗೆ ಸಲಹೆ ಕೊಡಲು ಬಸವರಾಜಪಾಟೀಲ ಸೇಡಂ ನೇತೃತ್ವದಲ್ಲಿ ಸಂಸ್ಥೆಯೊಂದನ್ನು ಮಾಡಿ ಅದಕ್ಕೆ ಸರ್ಕಾರದಿಂದ ಹಣ ಕೊಟ್ಟಿರಲಿಲ್ಲವೇ ಎಂದು ಪ್ರಶ್ನಿಸಿದರು.

    ಇದಕ್ಕೆ ತಿರುಗೇಟು ನೀಡಿದ ಬಿಜೆಪಿ ಸದಸ್ಯರು, ‘ನೀವು ಕೂಡ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಿಸಿಕೊಂಡಿಲ್ಲವೇ? ಮಹಾರಾಷ್ಟ್ರದಲ್ಲಿ ಗ್ಯಾರಂಟಿ ಸಮಿತಿ ರೀತಿಯ ವ್ಯವಸ್ಥೆ ಮಾಡಿ ಅಲ್ಲಿ ಪಕ್ಷದ ಕಾರ್ಯಕರ್ತರಿಗೆ ಸಂಬಳ ಕೊಟ್ಟು ಸಾಕುತ್ತಿಲ್ಲ ಎಂದರು.

    ಇದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ನಾನು ಮೊದಲು ಶಾಸಕನಾಗಿದ್ದೇನೆ. ಶಾಸಕರ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ನಾನು ಗೌರವಿಸುತ್ತೇನೆ. ಯಾವುದೇ ಕಾರಣಕ್ಕೂ ರಾಜ್ಯ, ಜಿಲ್ಲೆ ಮತ್ತು ತಾಲ್ಲೂಕು ಮಟ್ಟದ ಸಮಿತಿಗಳಲ್ಲಿ ಬದಲಾವಣೆ ಮಾಡುವುದಿಲ್ಲ ಎಂದರು.

    ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಆರ್.ಅಶೋಕ, ಸಮಿತಿಯ ಅಧ್ಯಕ್ಷರು ಶಾಸಕರನ್ನು ಲೆಕ್ಕಕ್ಕೇ ತೆಗೆದುಕೊಳ್ಳುತ್ತಿಲ್ಲ. ಅಗೌರವ ತೋರಿಸುತ್ತಿದ್ದಾರೆ. ಶಿಕಾರಿಪುರದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷರು ಅಧಿಕಾರಿಗಳನ್ನು ಕರೆದು ಸಭೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಅಧಿಕಾರಿಗಳ ಪಟ್ಟಿ ಮಾಡಿ ವರ್ಗಾವಣೆಗೂ ಮುಂದಾಗಿದ್ದಾರೆ ಎಂದು ಆರೋಪಿಸಿದರು.

    ಈ ವೇಳೆ ಮಾತನಾಡಿದ ಸಿಎಂ, ಅಂತಹ ಸಮಸ್ಯೆಗಳನ್ನು ಎದುರಾದರೆ, ನನ್ನ ಗಮನಕ್ಕೆ ತನ್ನಿ, ಪರಿಹರಿಸಲಾಗುತ್ತದೆ ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ಬೆಂಗಳೂರಿಗೆ ನಿಗದಿಯಾಗಿದ್ದ ತಮಿಳುನಾಡು…

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.