ತುಮಕೂರು: ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಕುಂಭ ಮೇಳದಲ್ಲಿ ಪುಣ್ಯ ಸ್ನಾನ ಮಾಡಿದರು. ತಾಯಿ ಹಾಗೂ ಕುಟುಂಬ ಸಮೇತ ಸಾಗಿ ತ್ರಿವೇಣಿ ಸಂಗಮದಲ್ಲಿ ಡಾ. ರಂಗನಾಥ ಮಿಂದೆದ್ದರು.
ಜೊತೆಗೆ 10 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಕರೆದುಕೊಂಡು ಶಾಸಕರು ಪುಣ್ಯ ಸ್ನಾನ ಮಾಡಿಸಿದರು. ಡಿಸಿಎಂ ಡಿಕೆಶಿ ಸಂಬಂಧಿಯಾಗಿರುವ ಶಾಸಕ ರಂಗನಾಥ್ ಅವರು ಡಿ.ಕೆ.ಶಿವಕುಮಾರ್ ಅವರು ಕುಂಭಮೇಳದಲ್ಲಿ ಸ್ನಾನ ಮಾಡಿದ ಬೆನ್ನಲ್ಲೇ ತಾವೂ ಸ್ನಾನ ಮಾಡಿದ್ದಾರೆ.
ಕುಂಭ ಮೇಳದ ಬಗ್ಗೆ ಕಾಂಗ್ರೆಸ್ ಅಪಸ್ವರ ಎತ್ತಿರುವ ನಡುವೆಯೂ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಪುಣ್ಯ ಸ್ನಾನ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4