ಪಾವಗಡ: ಮೂಲ ಸೌಕರ್ಯ ಕೇಳಿದ ಯುವಕನಿಗೆ ತಾಲೂಕು ಕಚೇರಿ ಆವರಣದಲ್ಲಿಯೇ ಕಪಾಳ ಮೋಕ್ಷ ಮಾಡಿ, ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪ ವಿರುದ್ಧ ಪಾವಗಡ ಮಂಡಲ ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಯಿತು.
ತನ್ನ ಸಮಸ್ಯೆಗಳನ್ನು ಹೇಳಿಕೊಳ್ಳಲು ಬಂದ ಯುವಕನಿಗೆ ಸ್ಪಂದಿಸುವ ಬದಲು ಶಾಸಕರು ದರ್ಪದಿಂದ ವರ್ತಿಸಿದ್ದು, ಯುವಕನಿಗೆ ಕಪಾಳ ಮೋಕ್ಷ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಶಾಸಕರ ವಿರುದ್ಧ ತಕ್ಷಣವೇ ಕಠಿಣ ಕ್ರಮಕೈಗೊಳ್ಳಬೇಕು ಎಂದು ತಾಲ್ಲೂಕು ದಂಡಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಂಡಲ ಅಧ್ಯಕ್ಷರು ರವಿಶಂಕರ್ ನಾಯ್ಕ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ರವಿ, ಕಾರ್ಯದರ್ಶಿ ಹನುಮಂತರಾಯಪ್ಪ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಒಬಯ್ಯ, ಕೃಷ್ಣಾ ನಾಯ್ಕ್, ಎಸ್.ಟಿ.ಮೋರ್ಚಾ ಅಧ್ಯಕ್ಷರು ಶಿವಕುಮಾರ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷಿಣಿ ಸರೋಜಮ್ಮ, ಓ.ಬಿ.ಸಿ. ಮೋರ್ಚಾ ಪ್ರದಾನ ಕಾರ್ಯದರ್ಶಿ ವೆಂಕಟೇಶ್, ಎಸ್.ಸಿ .ಮೋರ್ಚಾ ಉಪಾಧ್ಯಕ್ಷರು ರಾಮಾಂಜಿನಪ್ಪ, ರೈತಮೋರ್ಚಾ ಕಾರ್ಯದರ್ಶಿ ಭೀಮಪ್ಪ, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸದಸ್ಯರು ಪವನ್ ಕುಮಾರ್, ಸುಧೀರ್, ಮಂಡಲ ಉಪಾಧ್ಯಕ್ಷರು ಪಾಲಯ್ಯ, ಪ್ರದಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಅಶೋಕ್, ಕಾರ್ಯದರ್ಶಿ ಶೇಖರ್ ಬಾಬು, ತಿಪ್ಪೇಸ್ವಾಮಿ, ವಿವಿಧ ಮೋರ್ಚಾ ಅಧ್ಯಕ್ಷರು, ಪ್ರದಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಮುಖಂಡರು, ಪದಾಧಿಕಾರಿಗಳು ಹಾಗೂ ಹಲವರು ಉಪಸ್ಥಿತರಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5