ಬೆಳಗಾವಿ: ಮುಖ್ಯಮಂತ್ರಿ ಆದ್ರೆ ಜನರಿಗೆ ಉಚಿತ ಎಲ್ಲಾ ವಸ್ತುಗಳನ್ನು ಕೊಡುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ದಶಕಗಳಿಂದಲೂ ಮೋಸಗಾರಿಕೆ ಮಾಡಿಕೊಂಡೇ ಆಡಳಿತ ಮಾಡಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಿಎಂ ಆದ್ರೆ ಸಾಲಮನ್ನಾ ಮಾಡುತ್ತೇನೆ, 10 ಕೆಜಿ ಅಕ್ಕಿ ನೀಡ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಜನರಿಗೆ ನಿಮ್ಮ ಉಚಿತ ವಸ್ತುಗಳು ಬೇಕಾಗಿಲ್ಲ, ಮೊದಲು ಸ್ವಾಭಿಮಾನದಿಂದ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಪ್ರತಿಕ್ರಿಯಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಬಿಜೆಪಿಯಲ್ಲಿ ಬಣ ರಾಜಕೀಯ ಇಲ್ಲವೇ ಇಲ್ಲ. ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ. ಕೆಲ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಗಳಿರುತ್ತವೆ. ಹಾಗಂತೆ ಬಣ ರಾಜಕೀಯ ಎಂದು ಭಾವಿಸಿಕೊಳ್ಳುವುದು ತಪ್ಪು ಎಂದರು.
ಇದೇ ಮೋಸಗಾರಿಕೆ ಮಾಡಿಕೊಂಡು ದೇಶದಲ್ಲಿ ಕಾಂಗ್ರೆಸ್ ಆಡಳಿತ ಮಾಡಿದೆ. 2023ರ ಚುನಾವಣೆಯಲ್ಲಿ ರಾಜ್ಯದಲ್ಲಿ, 2024ರಲ್ಲಿ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಜನರಿಗೆ ಬೇಕಾದ ಎಲ್ಲಾ ಅಗತ್ಯತೆಗಳನ್ನು ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5