ಬೆಂಗಳೂರು: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಮೆರಿಕ ಅಧ್ಯಕ್ಷರ ಭವನವಾದ ಶ್ವೇತ ಭವನದಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ರಕ್ಷಣೆ, ವ್ಯಾಪಾರ ಮತ್ತು ವಲಸೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಿದರು.
ಇದರ ಬೆನ್ನಲ್ಲೇ ಅಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಕಾಂಗ್ರೆಸ್ ಸಂಸದ ಶಶಿತರೂರ್ ಮೆಚ್ಚುಗೆ ವ್ಯಕ್ತಪಡಿಸಿ, ಮೊದಲ ಬಾರಿಗೆ ಪ್ರಧಾನಿ ಮೋದಿ ನಡೆಯನ್ನು ಶ್ಲಾಘಿಸಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಶಶಿ ತರೂರ್, ಇಲ್ಲಿಯವರೆಗೆ, ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ಅವರ ಪ್ರೆಸ್ ಮೀಟ್ ಅನ್ನು ನೋಡಿದ್ದು, ತುಂಬಾ ಉತ್ತಮವಾಗಿದೆ.
ನಮಗೆಲ್ಲರಿಗೂ ಇದ್ದ ಕೆಲವು ದೊಡ್ಡ ಆತಂಕಗಳನ್ನು ಪರಿಹರಿಸಲಾಗಿದೆ. ಎಲ್ಲ ವಿಷಯಗಳ ಚರ್ಚೆಯನ್ನು ಸೆಪ್ಟೆಂಬರ್–ಅಕ್ಟೋಬರ್ ವೇಳೆಗೆ ಮುಕ್ತಾಯಗೊಳಿಸಲು ಗಂಭೀರ ಮಾತುಕತೆ ನಡೆಸಿದ್ದಾರೆ. ಇನ್ನೂ ರಕ್ಷಣಾ ರಂಗದಲ್ಲಿ ನಮಗೆ F–35 ಸ್ಟೆಲ್ತ್ ವಿಮಾನವನ್ನು ಮಾರಾಟ ಮಾಡುವ ಬದ್ಧತೆ ಕೂಡ ಪ್ರಮುಖವಾಗಿದ್ದು, ಅದು ಅತ್ಯಾಧುನಿಕ ಯುದ್ಧ ವಿಮಾನವಾಗಿದ್ದು, ಭಾರತಕ್ಕೆ ಶಕ್ತಿ ತುಂಬಲಿದೆ. ವಲಸಿಗರ ವಿಚಾರ ಬಿಟ್ಟು ಉಳಿದದ್ದೆಲ್ಲಾ ನಮ್ಮ ನಿರೀಕ್ಷೆಯಂತೆ ಆಗಿದೆ ಎಂದು ಶಶಿ ತರೂರು ಮೆಚ್ಚುಗೆಯ ಮಾತುಗಳನ್ನಾಡಿದರು.
ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯಿಂದ ನಾವು ಪಡೆಯ ಬಹುದಾದ ಎಲ್ಲ ನಿರೀಕ್ಷೆಗಳು ಸಹ ಈಡೇರಿವೆ ಎಂದಿರುವ ಅವರು, ಅಕ್ರಮ ವಲಸಿಗರನ್ನು ಭಾರತಕ್ಕೆ ವಾಪಸ್ ಕಳುಹಿಸುವ ವಿಧಾನವನ್ನು ಹೊರತುಪಡಿಸಿ, ಇನ್ನುಳಿದ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4