nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
    • ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    • ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ನಡೆಗೆ ಬಿಜೆಪಿ ವಿರೋಧ ರಾಜ್ಯಪಾಲರಿಗೆ ಮನವಿ
    ಜಿಲ್ಲಾ ಸುದ್ದಿ June 6, 2023

    ಕಾಂಗ್ರೆಸ್ ನಡೆಗೆ ಬಿಜೆಪಿ ವಿರೋಧ ರಾಜ್ಯಪಾಲರಿಗೆ ಮನವಿ

    By adminJune 6, 2023No Comments3 Mins Read
    belagavi

    ಬೆಳಗಾವಿ: 200 ಯುನಿಟ್ ಉಚಿತ ವಿದ್ಯುತ್ ಘೋಷಿಸಿ ಎರಡೆ ದಿನದಲ್ಲಿ ಪ್ರತಿ ಯುನಿಟ್ ಕ್ಕೆ ಸರಾಸರಿ 70 ಪೈಸೆ ವಿದ್ಯುತ್ ದರ ಹೆಚ್ಚಿಸಿರುವ ಹಾಗೂ ಆಧಾರ ಲಿಂಕ್ ಮಾಡದ ರೈತರ ಪಂಪಸೆಟ್ ಗಳ ಅನುದಾನ ಕಡಿತಗೊಳಿಸುವ, ಗೋ ಹತ್ಯೆ ನಿಷೇಧ ಕಾನೂನು ಹಿಂಪಡೆಯವ ಬಗ್ಗೆ ಹಾಗೂ ಹಾಲು ಗ್ರಾಹಕರ ಅನುದಾನ ಕಡಿತ ಮಾಡಿರುವ ಕಾಂಗ್ರೆಸ್ ಪಕ್ಷದ ದ್ವಂದ್ವ ನಿಲುವಿನ ಆದೇಶವನ್ನು ಹಿಂಪಡೆಯುವಂತೆ ಸರ್ಕಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಬೆಳಗಾವಿ ಬಿಜೆಪಿ ವತಿಯಿಂದ ಮನವಿ ಸಲ್ಲಿಸಲಾಯಿತು.

    ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪ್ರತಿಯೊಬ್ಬ ಗೃಹ ಬಳಕೆದಾರ ಗ್ರಾಹಕರಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವದಾಗಿ ಘೋಷಿಸಿ, ಜೂನ್ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತಗೆದುಕೊಂಡಿದ್ದರೆ ಆದರೆ, ಎಪ್ರಿಲ್ 1 ರಿಂದ ಪೂರ್ವಾನ್ವಯಿಸಿ ಎಲ್.ಟಿ ಮತ್ತು ಎಚ್ ಟಿ ಗ್ರಾಹಕರು ಬಳಸುವ ಪ್ರತಿ ಯುನಿಟ್‌ ವಿದ್ಯುತ್ ಗೆ ಸರಾಸರಿ 70ಪೈಸೆ ಹೆಚ್ಚಿಸಿ ಶೇ 8.31ರಷ್ಟು ಹೆಚ್ಚಳ ಮಾಡಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ನಿಲುವನ್ನು ಭಾರತೀಯ ಜನತಾ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ. ರಾಜ್ಯದ ಜನತೆಗೆ ಉಚಿತ ವಿದ್ಯುತ್ ನೀಡುವ ನಿರ್ಣಯ ಒಂದು ಕಡೆಯಾದರೆ, ವಿದ್ಯುತ್ ದರ ಹೆಚ್ಚಿಸುವ ಕ್ರಮ ಕೈಗೊಳ್ಳುತ್ತಿರುವದು, ಹಾಗೂ ಬರುವ ಆರು ತಿಂಗಳಲ್ಲಿ ರೈತರ ಪಂಪ ಸೆಟ್ ಗಳ ಆರ್.ಆರ್.ನಂಬರಗಳಿಗೆ ರೈತರ ಆಧಾರ್ ಲಿಂಕ್ ಮಾಡಲು ಆದೇಶ ಹೊರಡಿಸಿದ್ದು ಒಂದು ವೇಳೆ ತಪ್ಪಿದರೆ ಸರ್ಕಾರ ಅನುದಾನ ನೀಡುವದಿಲ್ಲ ಎಂದು ಆದೇಶದಲ್ಲಿ ತಿಳಿಸಿರುವದು ರಾಜ್ಯದ ರೈತರಲ್ಲಿ ಆತಂಕ ಸೃಷ್ಟಿ ಮೂಡಿಸಿದೆ.


    Provided by
    Provided by

    ತಕ್ಷಣ ತಾವುಗಳು ರಾಜ್ಯ ಸರ್ಕಾರದ ಈ ದ್ವಂದ್ವ ನಿಲುವಿನ ಆದೇಶವನ್ನು ರದ್ದುಗೊಳಿಸಿ ರಾಜ್ಯದ ಜನತೆಗೆ ಹಾಗೂ ರೈತೆರಿಗೆ ಸ್ಪಷ್ಟವಾದ ನಿಲುವು ತಿಳಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು. ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಆಸೆ, ಆಮಿಷಗಳನ್ನು ಒಡ್ಡಿ, ಉಚಿತ ಗ್ಯಾರಂಟಿ ಕಾರ್ಡ್‍ಗಳನ್ನು ಹಂಚಿ ಅಧಿಕಾರಕ್ಕೆ ಬಂದಿದೆ.

    ಚುನಾವಣೆಯ ಪ್ರಚಾರದಲ್ಲಿ ಒಂದು ಮನೆಗೆ 200 ಯುನಿಟ್ ವರೆಗೆ ವಿದ್ಯುತ್ ಉಚಿತವಾಗಿ ನೀಡುತ್ತೇವೆ ಎಂದು ಘೋಷಿಸಿದ ಕಾಂಗ್ರೆಸ್ ಇಂದು ಅಧಿಕಾರಕ್ಕೆ ಬಂದ ಮೇಲೆ ವರ್ಷದ 12 ತಿಂಗಳ ಸರಾಸರಿ ಲೆಕ್ಕವನ್ನು ಹಾಕಿ ಪ್ರತಿ ತಿಂಗಳ ಸರಾಸರಿ ಬಳಕೆಯ 10ಪ್ರತಿಶತ್ ಮಾತ್ರ ಹೆಚ್ಚಿಸುವ ನಾಟಕವಾಡುತ್ತಿದೆ. ಅದಕ್ಕಿಂತ ಹೆಚ್ಚು ಯುನಿಟ್ ವಿದ್ಯುತ್ ಉಪಯೋಗಿಸಿದರೆ ಅದಕ್ಕೆ ಹಣವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳುತ್ತಿದೆ. ಇದು ಜನವಿರೋಧಿ ನೀತಿಯಾಗಿದೆ ಆದ್ದರಿಂದ ಕಾಂಗ್ರೆಸ್‍ನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‍ರವರು ಗ್ಯಾರಂಟಿ ಕಾರ್ಡಗಳನ್ನು ಹಂಚಿದಂತೆ ಮತ್ತು ವಚನ ನೀಡಿದಂತೆ 200 ಯುನಿಟ್‍ ವರೆಗೆ ಮನೆಗಳಿಗೆ ಉಚಿತ ವಿದ್ಯುತ್ ನೀಡಬೇಕೆಂದು ಇಲ್ಲವಾದರೆ ಈ ಸರ್ಕಾರ ವಚನಭ್ರಷ್ಟ ಸರ್ಕಾರವಾಗುತ್ತದೆ ಆದ್ದರಿಂದ ತಾವು ಮಧ್ಯಪ್ರವೇಶಿಸಿ ನಿರ್ದೇಶನ ನೀಡಬೇಕು.

    ಗೋಹತ್ಯೆ ನಿಷೇಧ ಕಾನೂನು ರದ್ದತಿ ಬಗ್ಗೆ ಮಾತನಾಡುತ್ತಿರುವ ರಾಜ್ಯ ಪಶುಸಂಗೋಪನ ಸಚಿವರಾದ ವೆಂಕಟೇಶ್‍ ರವರನ್ನು ತಕ್ಷಣ ಸಚಿವ ಸ್ಥಾನದಿಂದ‌

    ಕೆಳಗಿಳಿಸಬೇಕು. ರಾಜ್ಯದಲ್ಲಿ ವಯಸ್ಸಾದ ಹಸುಗಳನ್ನು ಸಾಕಲು ಕಷ್ಟವಾಗುತ್ತದೆ ಆದ್ದರಿಂದ ಗೋ ಹತ್ಯೆ ನಿಷೇಧ ಕಾನೂನನ್ನು ರದ್ದು ಮಾಡಿ ಗೋಹತ್ಯೆಗೆ ಅವಕಾಶ ನೀಡಲಾಗುವುದು ಎಂದು ಹೇಳಿಕೆ ನೀಡಿದ್ದಾರೆ ಇದನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಆಗ್ರಹಿಸಿದರು.

    ನಮ್ಮ ದೇಶದಲ್ಲಿ ಹಸುಗಳನ್ನು ಪೂಜಾ ಸ್ಥಾನದಲ್ಲಿಟ್ಟು ಗೌರವಿಸಲಾಗುತ್ತಿದೆ. ದನಕರುಗಳು ನಮ್ಮ ದೇಶದ ಜನರಿಗೆ ಜೀವನ ಸಂಗಾತಿಗಳಾಗಿವೆ. ಕೃಷಿಯನ್ನು ಮುಂದುವರೆಸಲು, ನಿತ್ಯ ಜೀವನವನ್ನು ನಡೆಸಲು, ಆರ್ಥಿಕವಾಗಿ ಮೇಲೆ ಬರಲು, ಹಸು ಮತ್ತು ಎತ್ತುಗಳು ನಮ್ಮ ರಾಜ್ಯ ಮತ್ತು ದೇಶದಲ್ಲಿ ಬಹುಮುಖ್ಯ ಪಾತ್ರವಹಿಸಿವೆ. ಸಾವಿರಾರು ವರ್ಷಗಳಿಂದ ನಮ್ಮ ದೇಶದಲ್ಲಿ ಹಸುಗಳನ್ನು ಒದೆ ಮಾಡದೆ ತಾಯಿಯಂತೆ ರಕ್ಷಣೆ ಮಾಡಿಕೊಂಡು ಬಂದಿರುವುದು ನಮ್ಮ ಸಂಸ್ಕøತಿಯಾಗಿದೆ. 1948, 1964 ರಲ್ಲಿ ಕಾಂಗ್ರೆಸ್ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದಿತು. ನಮ್ಮ ರಾಜ್ಯದಲ್ಲಿ 2020-21 ರಲ್ಲಿ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೊಳಿಸಿದೆ. ಈಗ ಮತ್ತೆ ಇದನ್ನು ರದ್ದುಗೊಳಿಸಿ ಗೋ ಹತ್ಯೆಗೆ ಅವಕಾಶ ನೀಡಿದರೆ ಕೋಟ್ಯಾಂತರ ಜನರ ಭಾವನೆಗೆ ಧಕ್ಕೆಯುಂಟು ಮಾಡಿದಂತಾಗುತ್ತದೆ. ನಮ್ಮ ಮನೆಗಳಲ್ಲಿ ವಯಸ್ಸಾದ ತಂದೆ-ತಾಯಿಯರನ್ನು ಹೇಗೆ ನಾವು ರಕ್ಷಿಸುತ್ತೇವೆಯೋ ಹಾಗೆಯೇ ವಯಸ್ಸಾದ ಹಸುಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ. ಆದ್ದರಿಂದ ಕೂಡಲೆ ಸರ್ಕಾರ ಈ ಹೇಳಿಕೆಯನ್ನು ಹಿಂಪಡೆಯಬೆಕೆಂದು ಬಿಜೆಪಿ ಆಗ್ರಹಿಸುತ್ತದೆ.

    ಒಕ್ಕೂಟಗಳಿಂದ ನೀಡುತ್ತಿದ್ದ ಹಾಲಿನ ಪ್ರೋತ್ಸಾಹಧನ ಕಡಿತಮಾಡಿ ರಾಜ್ಯದಲ್ಲಿರುವ ಎಲ್ಲಾ ಹಾಲು ಒಕ್ಕೂಟಗಳು ಹಾಲು ಉತ್ಪಾದಕರಿಗೆ 1.5 ರೂ ಗಳ ನೀಡುವ ಮೊತ್ತವನ್ನು ನೀಡುತ್ತಿದ್ದವು. ಈಗ ಪ್ರೋತ್ಸಾಹ ಧನವನ್ನು ನಿಲ್ಲಿಸಿರುತ್ತಾರೆ. ಇದರಿಂದ ಲಕ್ಷಾಂತರ ರೈತರು ಮತ್ತು ಹಾಲು ಉತ್ಪಾದಕರಿಗೆ ತೊಂದರೆಯುಂಟುಮಾಡಿದೆ. ಸರ್ಕಾರ ಮಧ್ಯಪ್ರವೇಶ ಮಾಡಿ ಯಥಾರೀತಿಯಲ್ಲಿ ಹಾಲು ಉತ್ಪಾದಕರಿಗೆ ಒಕ್ಕೂಟಗಳಿಂದ ನೀಡುತ್ತಿದ್ದ 1.5 ರೂಗಳನ್ನು ನೀಡುವಂತೆ ಮಾಡಬೇಕೆಂದು ತಾವು ಸೂಚಿಸಬೇಕೆಂದು ಬಿಜೆಪಿ ತಮ್ಮಲ್ಲಿ ಒತ್ತಾಯಿಸುತ್ತಿದೆ.

    ಅಧಿಕಾರಕ್ಕೆ ಬಂದು ಒಂದೆ ವಾರದಲ್ಲಿ ಇಂತಹ ದ್ವಂದ್ವ ನಿಲುವು ಮೂಲಕ ಜನರಲ್ಲಿ ಆತಂಕ ಸೃಷ್ಟಿಸುತ್ತಿರುವ ಸರ್ಕಾರದ ಈ ನಿರ್ಣಯಗಳನ್ನು ಹಿಂದೆ ಪಡೆಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗತ್ತದೆ ಎಂದು ಸರ್ಕಾರಕ್ಕೆ‌ ಎಚ್ಚರಿಕೆ ನೀಡಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಹೈದರಾಬಾದ್: ತೆಲುಗು ಚಿತ್ರರಂಗದ ಉದಯೋನ್ಮುಖ ನಟ ಹಾಗೂ ಸೋಶಿಯಲ್ ಮೀಡಿಯಾ ಸ್ಟಾರ್ ಕೆ. ಭರತ್ ಕಾಂತ್ (31) ರಸ್ತೆ ಅಪಘಾತದಲ್ಲಿ…

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.