ತುಮಕೂರು: ”ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ನಗರದ ಭದ್ರಮ್ಮ ಚೌಲ್ಟ್ರಿ ವೃತ್ತದಲ್ಲಿರುವಂತಹ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಸಂಸದ ಜಿ ಎಸ್ ಬಸವರಾಜ್ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಹಾಗೂ ದೇಶದ್ರೋಹಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಕಾಂಗ್ರೆಸ್ ಕಚೇರಿ ಎದುರು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಬಾರದು ಎಂಬ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಕಾಂಗ್ರೆಸ್ ಕಚೇರಿ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ ವ್ಯವಸ್ಥೆ ಮಾಡಿದ್ದರು.
ಇನ್ನು ಕೆಲ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಒಳಗೆ ನುಗ್ಗಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಮಾತಿನ ಚಕಮಕಿ ನಡೆಯಿತು.
ಸುಮಾರು 50ಕ್ಕೂ ಹೆಚ್ಚು ಮಂದಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ವಶಕ್ಕೆ ತೆಗೆದುಕೊಂಡರು ಅಲ್ಲದೆ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಚಂದ್ರಶೇಖರ್ ಅವರನ್ನು ಕೆಲ ಬಿಜೆಪಿ ಕಾರ್ಯಕರ್ತರು ತಳ್ಳಾಟ ನೂಕಾಟ ನಡೆಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


