nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026
    Facebook Twitter Instagram
    ಟ್ರೆಂಡಿಂಗ್
    • ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ
    • ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!
    • ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!
    • ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?
    • ರೈಲ್ವೆಯಲ್ಲಿ 3,477 ಉದ್ಯೋಗ ಅವಕಾಶ; ಪದವೀಧರರಿಗೆ ಭರ್ಜರಿ ಚಾನ್ಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರ ಪರ ರೋಡ್ ನಡೆಸಿ ಸಚಿವ ಎಚ್.ಸಿ. ಮಹದೇವಪ್ಪ ಮತಯಾಚನೆ
    ರಾಜ್ಯ ಸುದ್ದಿ April 24, 2024

    ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರ ಪರ ರೋಡ್ ನಡೆಸಿ ಸಚಿವ ಎಚ್.ಸಿ. ಮಹದೇವಪ್ಪ ಮತಯಾಚನೆ

    By adminApril 24, 2024No Comments2 Mins Read
    saragooru

    ಸರಗೂರು: ಮಂಗಳವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುಪುತ್ರ ಸುನೀಲ್ ಬೋಸ್ ಪರ ರೋಡ್ ನಡೆಸಿ ಸಚಿವ ಎಚ್.ಸಿ. ಮಹದೇವಪ್ಪ ಮತಯಾಚನೆ ಮಾಡಿದರು.

    ಸರಗೂರು ಪಟ್ಟಣದ ಮಹಾವೀರ ಸರ್ಕಲ್ ಬಳಿ ಸಾಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ ಹಾಗೂ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಹೂವಿನ ಹಾರ ಹಾಕಿ ಹೂ ಚೆಲ್ಲಿ, ನಂತರ ರೋಡ್ ಶೋ ನಲ್ಲಿ ಒಂದನೇ ಮುಖ್ಯ ರಸ್ತೆ ಹಾಗೂ ಎರಡನೇ ಮುಖ್ಯ ಮೆರವಣಿಗೆ ಮೂಲಕ ಮತಯಾಚನೆ ಮಾಡಿ, ಸಂತೆ ಮಾಸ್ತಮ್ಮ ದೇವಸ್ಥಾನದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

    ಈ ವೇಳೆ ಮಾತನಾಡಿದ ಅವರು, ನನ್ನನ್ನು ಹತ್ತಿರದಿಂದ ಬಲ್ಲ ಜನರಿಗೆ, ಎಲ್ಲರನ್ನೂ ಪ್ರೀತಿಸುವ ನನ್ನ ಸ್ವಭಾವ ಗೊತ್ತು. ಈ ಕ್ಷೇತ್ರಕ್ಕೆ ಒಳ್ಳೆಯ, ಅಭಿವೃದ್ಧಿ ಕೆಲಸಗಳನ್ನು ಮಾಡಬೇಕೆಂಬ ಉದ್ದೇಶ ಇಟ್ಟುಕೊಂಡಿದ್ದೇವೆ. ನಿಸ್ವಾರ್ಥವಾಗಿ ಸಂವಿಧಾನದ ಆಶಯಗಳಿಗೆ ಬದ್ಧನಾಗಿ ಕೆಲಸ ಮಾಡಬೇಕೆಂಬ ಆಶಯ ಹೊಂದಿದ್ದೇನೆ ಎಂದರು.

    ಬಿಜೆಪಿ ಸರ್ಕಾರದ ವೈಫಲ್ಯಗಳಿಂದ ಜನರು ಬಿಜೆಪಿ ಸರ್ಕಾರದ ವಿರೋದಿಯಾಗಿದ್ದಾರೆ.. ಬಡಜನರಿಗೆ ಅನ್ಯಾಯವಾಗಿದೆ. ಬಡವರ ಪರ ಮುಖ್ಯಮಂತ್ರಿಯವರ ಬಜೆಟ್, ಧ್ರುವ ನಾರಾಯಣ ಅವರ ಅವಧಿಯಲ್ಲಿ ದೊರೆತ ಕೇಂದ್ರ ಯೋಜನೆಗಳು, ಮತ ದಾರರು ಕಾಂಗ್ರೆಸ್ ಬಗ್ಗೆ ಇಟ್ಟಿರುವ ವಿಶ್ವಾಸದಿಂದ ಈ ಬಾರಿ ಚುನಾವಣೆಯನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿದ್ದರಾಮಯ್ಯನವರು ಎರಡು ಬಾರಿ ಮುಖ್ಯಮಂತ್ರಿಯಾಗಿ ಜಿಲ್ಲೆಗೆ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ನೀಡಿದ್ದಾರೆ. ಲೋಕಸಭಾ ಸದಸ್ಯರಾಗಿದ್ದಆರ್. ಧ್ರುವನಾರಾಯಣ್ ಹಾಗೂ ನಾನು ಸೇರಿ ಎಚ್ ಡಿ ಕೋಟೆ ಮತ್ತು ಸರಗೂರು ತಾಲ್ಲೂಕಿಗೆ ಅಭಿವೃದ್ದಿಗೆ ಸಾಕಷ್ಟು ಕೆಲಸ ಮಾಡಿದ್ದೇವೆ. ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಭರವಸೆಗಳನ್ನು ಈಡೇರಿಸಿದ್ದಾರೆ. ಈ ಬಾರಿ ಐದು ಗ್ಯಾರಂಟಿಗಳನ್ನು ನೀಡಿ ಬಡವರ ಪರ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

    ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ ಬಿಜೆಪಿ ಸರ್ಕಾರ ಇದ್ದ ಸಮಯದಲ್ಲಿ ಒಂದು ರೂಪಾಯಿ ಅನುದಾನ ಕೊಡಲಿಲ್ಲ.ಬಿಜೆಪಿ ಪಕ್ಷದಿಂದ ತಾಲ್ಲೂಕಿಗೆ ಯಾವ ಕೊಡುಗೆ ದೊರೆತಿದೆ ಎಂಬುದನ್ನು ಮತದಾರರು ಅರ್ಥ ಮಾಡಿಕೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 5 ಗ್ಯಾರಂಟಿ ಗಳನ್ನು ಈಡೇರಿಸಿದ್ದಾರೆ.  ಹಾಗಾಗಿ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮತದಾರ ಬಂಧುಗಳಲ್ಲಿ ಸಚಿವ ಎಚ್ ಸಿ ಮಹದೇವಪ್ಪ ಮನವಿ ಮಾಡಿದರು. ರೋಡ್ ಶೋ ನಲ್ಲಿ ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಹಾಗೂ ಸಾಮಾಜದ ಬಂಧುಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದರು.

    ಈ ಸಂದರ್ಭದಲ್ಲಿ  ಮಾಜಿ ಜಿಪಂ ಸದಸ್ಯರು ಪಿ ರವಿ ಚಿಕ್ಕವೀರನಾಯಕ, ಭಾಗ್ಯಲಕ್ಷ್ಮಿ, ನಂದಿನಿ, ಟೌನ್ ಅಧ್ಯಕ್ಷ ನಾಗರಾಜು, ಪುರಸಭೆ ಸದಸ್ಯ ಎಚ್ ಸಿ ನರಸಿಂಹಮೂರ್ತಿ, ಮಾಜಿ ಸಚಿವ ಎಂ ಶಿವಣ್ಣ,  ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಬಿರ್ವಾಳ್ ಬಸವರಾಜು,ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಬಿರ್ವಾಳ್ ಚಿಕ್ಕಣ್ಣ, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು,,ಪಪಂ ಸದಸ್ಯರು ಶ್ರೀನಿವಾಸ ಚಲುವಕೃಷ್ಣ, ಬಾಬು ಜಗಜೀವನರಾಂ ವಿಚಾರ ವೇದಿಕೆ ಅಧ್ಯಕ್ಷ ಕಲ್ಲಂಬಾಳು ನಾಗಣ್ಣ, ಪುಟ್ಟಸ್ವಾಮಿ, ಹಾದನೂರು ಪ್ರಕಾಶ್,ಮೈ ಮುಲ್ ನಿರ್ದೇಶಕ ಈರೇಗೌಡ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಹೂವಿನಕೊಳ ಸಿದ್ಧರಾಜು, ಎಪಿಎಂಸಿ ಅಧ್ಯಕ್ಷ ದೇವಲಾಪುರ ಸಿದ್ದರಾಜು, ಟೌನ್ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ಮಂಜುನಾಥ,ಮುಖಂಡರು ಸೀತಾರಾಮ್,ಅಣ್ಣಯ್ಯ ಸ್ವಾಮಿ,ಶಂಭುಲಿಂಗನಾಯಕ, ಪುರದಕಟ್ಟೆ ಬಸವರಾಜು ಗುರುಸ್ವಾಮಿ,ಎಸ್ಎಸ್ ಪ್ರಭುಸ್ವಾಮಿ, ಕೆಂಡಗಣ್ಣಸ್ವಾಮಿ, ರಮೇಶ್ ರಂಗನಾಥ, , ಸುಭಾನ್ ಮರಿದೇವಯ್ಯ,ಗ್ರಾಮೀಣ ಮಹೇಶ್, ಪ್ರಕಾಶ್ ಚಂದ್ರ, ಜಯಕುಮಾರ್, ಮಣಿ, ಉಯ್ಯಂಬಳ್ಳಿ ನಾಗರಾಜು, ಮಂಜುನಾಥ್, ಚನ್ನಿಪುರ ನಾಗರಾಜು, ಮಣಿಕಂಠ, ಲೋಕೇಶ್, ಮಸಹಳ್ಳಿ ಸೂರ್ಯ, ಮಹೇಶ್, ಇನ್ನೂ ಮುಖಂಡರು ಸೇರಿದಂತೆ ಹಾಗೂ ಕಾರ್ಯಕರ್ತರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!

    October 9, 2026

    ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

    October 9, 2026

    ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?

    October 9, 2026

    Comments are closed.

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ತುಮಕೂರು: ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಆರ್ಥಿಕ ಸಂಕಷ್ಟದಲ್ಲಿರುವ ರೈತರಿಂದ ಮೈಕ್ರೋ ಫೈನಾನ್ಸ್ ಹಾಗೂ ವಿವಿಧ ಹಣಕಾಸು ಸಂಸ್ಥೆಗಳು…

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ

    October 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.