ರಾಜ್ಯ ಬಿಜೆಪಿಯ ಉಪಾಧ್ಯಕ್ಷೆ ಡಾ. ತೇಜಸ್ವಿನಿ ಅನಂತ್ ಕುಮಾರ್ ಗೆ ಕಾಂಗ್ರೆಸ್ ತೆರೆಮರೆಯಲ್ಲಿ ಗಾಳ ಹಾಕುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ. 2024ರ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ನೇರವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ತರಬೇಕೆಂಬ ಕಾರಣಕ್ಕೆ ಬಿಜೆಪಿಯ ಹಿರಿಯ ನಾಯಕರಾಗಿದ್ದ ದಿವಂಗತ ಅನಂತಕುಮಾರ್ ಅವರ ಪತ್ನಿ ಡಾ. ತೇಜಸ್ವಿನಿ ಅನಂತಕುಮಾರ್ ಅವರನ್ನು ಕಾಂಗ್ರೆಸ್ ನತ್ತ ಸೆಳೆಯಲು ವೇದಿಕೆ ಸಿದ್ಧಪಡಿಸುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.
ಕೇವಲ ಅನಂತ್ ಕುಮಾರ್ ಅವರ ಹೆಸರಿನಿಂದ ಮಾತ್ರವಲ್ಲದೆ, ಬಿಜೆಪಿಯಲ್ಲಿ ಅನಂತ್ ಕುಮಾರ್ ಅವರ ಕುಟುಂಬ ಯಾವುದೇ ಸ್ಥಾನಮಾನ ಕೊಟ್ಟಿಲ್ಲ. ರಾಜಕೀಯವಾಗಿ ಅವರನ್ನು ಮೇಲೆ ಬರಲು ಬಿಡುತ್ತಿಲ್ಲ ಎಂಬ ಕಾರಣವನ್ನು ಮುಂದಿಟ್ಟುಕೊಂಡು, ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಆಪರೇಷನ್ ಹಸ್ತ ಶುರು ಮಾಡಿದೆ ಎಂಬ ಚರ್ಚೆಗಳು ಆರಂಭವಾಗಿದೆ.
ಎಲ್ಲವೂ ಅಂದುಕೊಂಡಂತೆ ಆದ್ರೆ, ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಡಾ. ತೇಜಸ್ವಿನಿ ಅನಂತ್‌ಕುಮಾರ್ ಅವರನ್ನು ಪಕ್ಷಕ್ಕೆ ಸೆಳೆದು, ಅದೇ ಚುನಾವಣೆಯಲ್ಲಿ ಡಾ. ತೇಜಸ್ವಿನಿ ಅನಂತಕುಮಾರ್ ಅವರನ್ನು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ವಲಯದಲ್ಲಿ ಚರ್ಚೆಯಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


