ತುಮಕೂರು: ಅಮೆರಿಕಾದಲ್ಲಿ ಭಾರತೀಯರ ಮೇಲೆ ನಡೆಯುತ್ತಿರುವ ಕೃತ್ಯ ಖಂಡಿಸಿ ಮತ್ತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಭಾರತೀಯರನ್ನ ಗಡಿಪಾರು ಮಾಡುವ ಮೂಲಕ ಅಮೆರಿಕಾ ಸರ್ಕಾರ ಅನಾಗರೀಕವಾಗಿ ನಡೆದುಕೊಂಡಿದೆ ಎಂದು ಜಿಲ್ಲಾ ಕಾಂಗ್ರೆಸ್ ನಿಂದ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಯಿಂದ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಭಾರತೀಯರ ಪರವಾಗಿ ನಿಲ್ಲದೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಲಾಯಿತು.
ಭಾರತೀಯರ ಕರೆತರಲು ಒಂದೇ ಒಂದು ವಿಮಾನ ವ್ಯವಸ್ಥೆ ಮಾಡಿಲ್ಲ, ಭಾರತೀಯರನ್ನು ಖೈದಿಗಳಂತೆ ನಡೆಸಿಕೊಂಡಿದ್ದಾರೆ ಎಂದು ದೂರಿದರು. ಪ್ರತಿಭಟನೆ ವೇಳೆ ಮೋದಿ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4