ಹುಬ್ಬಳ್ಳಿ: ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತೆ ಅಂತಾ ಗೊತ್ತಿದೆ. ರಾಜ್ಯ ಸರ್ಕಾರದಿಂದ ಮತ್ತೊಮ್ಮೆ ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ಗೆ ಅಧಿಕಾರ ಇದೆ, ಏನು ಮಾಡುತ್ತಾರೆ ನೋಡೋಣ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.
ಸಾರ್ವತ್ರಿಕವಾಗಿ ಜನರಿಗೆ ಅನ್ಯಾಯವಾದ್ರೆ ಹೋರಾಟ ಮಾಡ್ತೀವಿ. ಕಾನೂನಾತ್ಮಕವಾಗಿ, ರಾಜಕೀಯವಾಗಿ ಹೋರಾಟ ಮಾಡುತ್ತೇವೆ. ಎಲ್ಲವನ್ನೂ ಬದಲಾಯಿಸುತ್ತೇವೆ ಅನ್ನೋದು ದುರಹಂಕಾರದ ಮಾತು. ಇದು ರಿವರ್ಸ್ ಗೇರ್ ಸರ್ಕಾರ. ಗ್ಯಾರಂಟಿಯಲ್ಲೂ ಕಾಂಗ್ರೆಸ್ ಸರ್ಕಾರ ರಿವರ್ಸ್ ಹೋಗುತ್ತಿದೆ.
ನಾವು ಮಾಡಿದ ಜನಪರ ಕಾನೂನಿನಲ್ಲಿ ರಿವರ್ಸ್ ಹೋಗುತ್ತಿದ್ದಾರೆ. ಇದರ ಪರಿಣಾಮ ಜನರಿಗೆ ಕೂಡಲೇ ಗೊತ್ತಾಗಿದೆ. ರಿವರ್ಸ್ ಗೇರ್ ಸರ್ಕಾರ ಅಷ್ಟೇ ಅಲ್ಲ, ಸೇಡಿನ ಕ್ರಮ ಮಾಡ್ತಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


