ಕೊರಟಗೆರೆ: ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತಿಳುವಳಿಕೆ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ಈ ಬಗ್ಗೆ ಜನರಿಗೆ ತಿಳುವಳಿಕೆ ನೀಡುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕಾಂಗ್ರೆಸ್ ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಕಾರ್ಯಕರ್ತರಿಗೆ ಕರೆ ನೀಡಿದರು.
ಕಾಂಗ್ರೆಸ್ ಜನಜಾಗೃತಿ ಅಭಿಯಾನದ ಪೂರ್ವ ಭಾವಿ ಸಮಾವೇಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಾಧನೆ ಹಾಗೂ ಕಾಂಗ್ರೆಸ್ ನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನ ಸಾಮಾನ್ಯರಿಗೆ ಮನಮುಟ್ಟುವಂತೆ ಮಾಹಿತಿ ನೀಡುವಂತೆ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರವು ಜನ ಸಾಮಾನ್ಯರಿಗೆ ಸಂಕಷ್ಟ ಉಂಟಾಗುವಂತೆ ತಿಂಗಳಿಗೊಮ್ಮೆ ಬೆಲೆ ಏರಿಕೆ ಮಾಡುತ್ತಲೇ ಇದೆ. ಈಗಾಗಲೇ ಕಾಂಗ್ರೆಸ್, ಪೆಟ್ರೋಲ್, ಡೀಸೆಲ್ ಬೆಲೆಯ ವಿರುದ್ಧ ಹೋರಾಡಿ ಸರ್ಕಾರಕ್ಕೆ ಮನವರಿಕೆ ಮಾಡುತ್ತಲೇ ಬಂದಿದೆ. ಮುಂದಿನ ದಿನಗಳಲ್ಲಿ ಜನರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಹೇಳಿದರು.
ಇದೇ ತಿಂಗಳ ಭಾನುವಾರದಂತೆ ತುಮಕೂರು ಜಿಲ್ಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ, ಬೆಲೆ ಏರಿಕೆಯ ಕುರಿತು ಸರ್ಕಾರಕ್ಕೆ ಬಿಸಿ ಮುಟ್ಟಿಸುವಂತೆ ಅವರು ಮನವಿ ಮಾಡಿಕೊಂಡರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700