nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026
    Facebook Twitter Instagram
    ಟ್ರೆಂಡಿಂಗ್
    • ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು
    • ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು
    • ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ
    • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
    • ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ
    • ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
    • ಕಾರವಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಮಗಾರಿಗಳಿಗೆ ಎಲ್ ಒಸಿ ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ: ಹೆಚ್.ಡಿ.ಕುಮಾರಸ್ವಾಮಿ
    ರಾಜ್ಯ ಸುದ್ದಿ June 10, 2023

    ಕಾಮಗಾರಿಗಳಿಗೆ ಎಲ್ ಒಸಿ ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ: ಹೆಚ್.ಡಿ.ಕುಮಾರಸ್ವಾಮಿ

    By adminJune 10, 2023No Comments2 Mins Read
    h d kumaraswamy

    ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

    ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು.


    Provided by
    Provided by

    ಹಿಂದಿನ ಬಿಜೆಪಿ ಸರಕಾರವನ್ನು 40 ಪರ್ಸೆಂಟ್ ಸರಕಾರ ಎಂದು ಟೀಕಿಸುತ್ತಿದ್ದ ಕಾಂಗ್ರೆಸ್, ಈಗ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ. ಹಿಂದಿನ ಸರಕಾರದಲ್ಲಿ ಕೈಗೊಳ್ಳಲಾಗಿದ್ದ ಕಾಮಗಾರಿಗಳಿಗೆ LOC ಕೊಡುವುದಕ್ಕೆ ಈ ಸರಕಾರದಲ್ಲಿ 5% ಫಿಕ್ಸ್ ಮಾಡಿದ್ದಾರೆ. ಇಂಥವರು ಭಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಆಕ್ರೋಶ ವ್ಯಕ್ತಪಡಿಸಿದರು.

    ಈ ಸರ್ಕಾರದಲ್ಲಿ ಪ್ರಾರಂಭಿಕ ಹಂತದಲ್ಲಿಯೇ ಅಧಿಕಾರಿಗಳ ಸಭೆ ನಡೆದಿದೆ. ಆ ಸಭೆಯಲ್ಲಿ ಅಧಿಕಾರಿಗಳಿಗೆ ಯಾವ ರೀತಿ ಪಾಠ ಮಾಡಿದ್ದಾರೆ ಇವರು ಎನ್ನುವ ಮಾಹಿತಿ ನನಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರು ಕೆಲವು ಸೂಚನೆಗಳನ್ನು ಕೊಟ್ಟಿದ್ದಾರೆ. ನಾವು ಹೇಳಿದಂತೆ ಮಾತ್ರ ಕೇಳಬೇಕು ಎಂದು ಫರ್ಮಾನು ಹೊರಡಿಸಿದ್ದಾರೆ. ಇದರ ಅರ್ಥ ಏನೆಂದರೆ, ನಮಗೆ ಬೇಕಾದ ಹಾಗೆ ಕೆಲಸ ಮಾಡಿ, ಇಲ್ಲವೇ ಹೊರಡಿ ಎನ್ನುವುದೇ ಈ ಫರ್ಮಾನಿನ ಒಳಾರ್ಥ ಎಂದು ಕುಮಾರಸ್ವಾಮಿ ಅವರು ದೂರಿದರು.

    ಪ್ರಾರಂಭಿಕ ಹಂತದಲ್ಲಿ ಕಾಂಗ್ರೆಸ್ ಸರಕಾರ ಕೆಲವು ನಿರ್ಧಾರ ತೆಗೆದುಕೊಂಡಿದೆ. ಹಿಂದಿನ ಟೆಂಡರ್ ಗಳು ಸೇರಿದಂತೆ ಅನೇಕ ಕಡೆ ಅನುದಾನ ತಡೆ ಹಿಡಿಯಲಾಗಿದೆ. ಬಿಜೆಪಿ ಸರಕಾರ 600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿತ್ತು.  ಕಳೆದ ಮೇ 6ರಂದು 675 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳ ಗುತ್ತಿಗೆದಾರರಿಗೆ ಎಲ್ ಒಸಿ ರಿಲೀಸ್ ಆಯಿತು. ಆ ಸಂದರ್ಭದಲ್ಲಿ ಒಬ್ಬ ಕಾಂಗ್ರೆಸ್ ಎಂಪಿ ಹೇಳಿದ್ದರಂತೆ, ಯಾವುದೇ ಕಾರಣಕ್ಕೂ ಹಣ ಬಿಡುಗಡೆ ಮಾಡಬೇಡಿ, ನಮ್ಮ ಸರ್ಕಾರ ಬರುತ್ತದೆ ಅಂತ ಹೇಳಿದ್ದರಂತೆ ಅವರು. ಅವರು ಯಾಕೆ ಹೇಳಿದ್ದರು? ಯಾರು ಆ ಎಂಪಿ ಯಾರು? ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರಶ್ನಿಸಿದರು.

    675 ಕೋಟಿ ಮೊತ್ತದ ಎಲ್ ಒಸಿ ಹಣ ಯಾಕೆ ಬಿಡುಗಡೆ ಆಗಲಿಲ್ಲ ಎನ್ನುವುದು ಅನುಮಾನಕ್ಕೆ ಕಾರಣ. ಈಗ LOC ಬಿಡುಗಡೆ ಆಗಬೇಕು ಅಂದರೆ 5 ಪರ್ಸೆಂಟ್ ಕೊಡಲೇಬೇಕು ಎಂದು ಡಿಮ್ಯಾಂಡ್ ಇಟ್ಟಿದ್ದಾರೆ. 40 ಪರ್ಸೆಂಟ್ ಜತೆಗೆ ಹೆಚ್ಚುವರಿಯಾಗಿ 5 ಪರ್ಸೆಂಟ್ ಕೊಟ್ರೆ ಹಣ ಬಿಡುಗಡೆ ಮಾಡ್ತೀವಿ ಅಂತ ಹೇಳಿದ್ದಾರಂತೆ. ಅಲ್ಲಿಗೆ ಇದು 45 ಪರ್ಸೆಂಟ್ ಸರಕಾರ ಎಂದಾಯಿತಲ್ವೆ? ಆಗಿರುವ ಕಾಮಗಾರಿಗಳಿಗೆ ಪರ್ಸಂಟೇಜ್ ಕೇಳುತ್ತಿದ್ದಾರೆ, ಇವರು ಸತ್ಯ ಹರಿಶ್ಚಂದ್ರರು ಎಂದು ಕುಮಾರಸ್ವಾಮಿ ಕಿಡಿಕಾರಿದರು.

    ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಹಾಜರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026

    ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ

    February 23, 2026

    ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    February 23, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಮಂಗಳೂರು: ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಲೂಡೋ ಕಾಯಿನ್ (ದಾಳ) ನುಂಗಿದ ಪರಿಣಾಮ ಎಂಟು ವರ್ಷದ ಬಾಲಕಿಯೊಬ್ಬಳು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ…

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026

    ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ

    February 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.