ಸರಗೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ವಿನೂತನ ಮಾದರಿಯಲ್ಲಿ ಅಧಿಕಾರ ಪದಗ್ರಹಣ ನಡೆಯುತ್ತಿದೆ. ಕ್ರಿಯಾಶೀಲ ಅಧ್ಯಕ್ಷರ ಕಾರ್ಯಕ್ರಮ ಪ್ರತಿ ಕಾರ್ಯಕರ್ತರಿಗೂ ತಲುಪುವ ಉದ್ದೇಶದೊಂದಿಗೆ ನಾವುಗಳು ಕೆಲಸ ಮಾಡಬೇಕು ಎಂದು ವಿಧಾನಸಭಾ ಕ್ಷೇತ್ರದ ಯೂಥ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು ಹೇಳಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಯೂತ್ ಬ್ಲಾಕ್ ಕಾಂಗ್ರೆಸ್ ಎಚ್.ಡಿ.ಕೋಟೆ ಮತ್ತು ಸರಗೂರು ಸಮಿತಿ ವತಿಯಿಂದ ಪೂರ್ವಭಾವಿ ಹಮ್ಮಿಕೊಂಡಿದ್ದು, ಪಕ್ಷದ ಕಚೇರಿಯಲ್ಲಿ ಶುಕ್ರವಾರದಂದು ವಿಧಾನಸಭಾ ಕ್ಷೇತ್ರದ ಯೂಥ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು ಹಾಗೂ ಸರಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮನುಗನಹಳ್ಳಿ ಮಾದಪ್ಪ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮಾತನಾಡಿದರು.
ಯೂಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥಗೌಡರವರ ಮಾ.17 ರಂದು ಪದಗ್ರಹಣ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಹಾಗೂ ನಾಯಕರು ಕಾರ್ಯಕ್ರಮಕ್ಕೆ ಭಾಗವಹಿಸುತ್ತಿದ್ದಾರೆ. ಎರಡು ತಾಲೂಕಿನ ಬ್ಲಾಕ್ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರು ಮಾ.17 ರಂದು ನಡೆಯಲಿರುವ ಪದಗ್ರಹಣ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿಸಿಕೊಂಡು ಹೋಗು ಬೇಕು ರಾಜ್ಯ ಸಮಿತಿ ವತಿಯಿಂದ ಕರೆ ನೀಡಿದ್ದಾರೆ. ಅದರಂತೆ ನಾವುಗಳು ಸಿದ್ದರಾಗಬೇಕು ಎಂದು ಸೂಚನೆ ನೀಡಿದರು.
ತಾಲ್ಲೂಕಿನಿಂದ ಯುವಕರು ಹಾಗೂ ಕಾರ್ಯಕರ್ತರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಕ್ಷದ ಸಂಘಟನೆಯನ್ನು ಕಾಂಗ್ರೆಸ್ ಭದ್ರಕೋಟೆಯನ್ನು ತೊರಸುಹೋಣ ಎಂದರು.
ನಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮನುಗನಹಳ್ಳಿ ಮಾದಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಕಟ್ಟಿರುವುದು ಯುವಕರಿಂದಲ್ಲೇ ರಾಜ್ಯ ನಾಯಕರು ಯೂಥ್ ಸಂಘಟನೆ ಮಾಡಿಕೊಂಡು ಬಂದವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇನ್ನೂ ನಾಯಕರು ಯೂಥ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ನಂತರ ಸರ್ಕಾರದ ಮಟ್ಟದಲ್ಲಿ ಸಚಿವ ಹಾಗೂ ವಿವಿಧ ಸ್ಥಾನಗಳಲ್ಲಿ ಇದ್ದಾರೆ. ಅದರಂತೆ ತಾವುಗಳು ಗ್ರಾಮ ಮಟ್ಟದಲ್ಲಿ ಪಕ್ಷದ ಸಂಘಟನೆ ಮಾಡಿ ಇನ್ನೂ ಉನ್ನತ ಮಟ್ಟದ ಸ್ಥಾನವನ್ನು ಪಡದುಕೊಂಡು ಜನರ ಸೇವೆ ಮಾಡಿ ತಿಳಿಸಿದರು.
ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಅಧ್ಯಕ್ಷ ಚಾಮರಾಜು, ಎಚ್.ಡಿ.ಕೋಟೆ ಯೂಥ್ ಕಾಂಗ್ರೆಸ್ ಅಧ್ಯಕ್ಷ ಅಜರುದ್ದೀನ್, ಮಹಿಳಾ ಘಟಕದ ಅಧ್ಯಕ್ಷ ಸೌಮ್ಯ ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಳಸೂರು ಬಸವರಾಜು, ಟೌನ್ ಅಧ್ಯಕ್ಷ ಸ್ಟುಡಿಯೋ ಪ್ರಕಾಶ್, ವಿಧಾನಸಭಾ ಕ್ಷೇತ್ರದ ಯೂಥ್ ಕಾಂಗ್ರೆಸ್ ಉಪಾಧ್ಯಕ್ಷ ಶಶಿ ಪಾಟೀಲ್, ಬ್ಲಾಕ್ ಉಪಾಧ್ಯಕ್ಷ ಮನೋಜ್, ಮುಖಂಡರು ಗುತ್ತಿಗೆದಾರ ಮಂಜುನಾಥ, ವಿಧಾನಸಭಾ ಕ್ಷೇತ್ರದ ಯೂಥ್ ಕಾಂಗ್ರೆಸ್ ಉಪಾಧ್ಯಕ್ಷ ಯಾಸಿನ್, ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿ ಮೋಹನ್ ಕುಮಾರ್ ಎಂ.ಸಿ., ವಿಜಯ್, ಹೈರಿಗೆ ಮಲ್ಲೇಶ್, ಮುಳ್ಳೂರು ಲೋಕೇಶ್, ಮಸಹಳ್ಳಿ ಸೂರ್ಯ ಕುಮಾರ್, ಮೊಳೆಯೂರು ಕಾವಲ್ ನಾಗೇಂದ್ರ ಮುಂತಾದವರು ಹಾಜರಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4