ಬೆಂಗಳೂರು: ವಿಧಾನಪರಿಷತ್ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ತಯಾರಿ ಜೋರಾಗಿದೆ. ಚುನಾವಣೆಗೆ ಸ್ಪರ್ಧಿಸಲು ಬಯಸುವವರು ಅರ್ಜಿ ಸಲ್ಲಿಸಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಈ ಸಂಬಂಧ ಮಾತನಾಡಿದ ಡಿ.ಕೆ .ಶಿವಕುಮಾರ್ , ಮುಂದಿನ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿದೆ, ಚುನಾವಣೆಗೆ ಸ್ಪರ್ಧಿಸಲು ಬಯಸುವವರು ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ 5 ಸಾವಿರ ಕೊಟ್ಟು ಅರ್ಜಿ ಪಡೆಯಬಹುದು, ಅರ್ಜಿ ಜೊತೆ 2 ಲಕ್ಷ ಡಿಡಿ ಶುಲ್ಕ ನೀಡಬೇಕು. ಎಸ್ ಸಿ ಹಾಗೂ ಎಸ್ ಟಿ ಗೆ 1 ಲಕ್ಷ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಯಾರಿಗೆ ಟಿಕೆಟ್ ಬೇಕು ಅವರು ಅರ್ಜಿ ಸಲ್ಲಿಸಬಹುದು, ವಲಸೆ ಹೋದವರಿಗೆ ಮುಕ್ತ ಆಹ್ವಾನವಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಯಾರು ಕಾಂಗ್ರೆಸ್ ಟಿಕೆಟ್ ಬಯಸುತ್ತಾರೋ ಅವರು ಅರ್ಜಿ ಹಾಕಬಹುದು. ನಾನು ಸ್ಪರ್ಧಿಸಬೇಕಾದರೂ ಕಾಂಗ್ರೆಸ್ ಪಕ್ಷಕ್ಕೆ ಅರ್ಜಿ ಹಾಕಬೇಕು. ಕಾಂಗ್ರೆಸ್ ಟಿಕೆಟ್ ಗೆಯಾರು ಬೇಕಾದರೂ ಅರ್ಜಿ ಹಾಕಬಹುದು. ವಲಸೆ ಹೋದವರಿಗೂ ಮುಕ್ತ ಆಹ್ವಾನ ಎಂದು ಹೇಳುವ ಮೂಲಕ ಈಗಾಗಲೇ ಕಾಂಗ್ರೆಸ್ ಬಿಟ್ಟು ಬೇರೆ–ಬೇರೆ ಪಕ್ಷಗಳಿಗೆ ಹೋಗಿರುವ ನಾಯಕರಿಗೂ ವಾಪಸ್ ಪಕ್ಷಕ್ಕೆ ಬರುವಂತೆ ಪರೋಕ್ಷವಾಗಿ ಆಹ್ವಾನ ಕೊಟ್ಟಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


