nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹರ್ ಘರ್ ತಿರಂಗಾ ಕುರಿತು ಕಾಂಗ್ರೆಸ್ ಟೀಕೆಗೆ ಸಿಎಂ ತಿರುಗೇಟು
    ರಾಜ್ಯ ಸುದ್ದಿ August 12, 2022

    ಹರ್ ಘರ್ ತಿರಂಗಾ ಕುರಿತು ಕಾಂಗ್ರೆಸ್ ಟೀಕೆಗೆ ಸಿಎಂ ತಿರುಗೇಟು

    By adminAugust 12, 2022No Comments2 Mins Read

    ಎಪ್ಪತ್ತೈದನೆ ಸ್ವಾತಂತ್ರ್ಯೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಅದ್ಧೂರಿಯಾಗಿ ಆಚರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮೈಸೂರಿನಲ್ಲಿಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ಮಾಧ್ಯಮಗಳೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಹೇಳಿದರು.

    75ನೇ ಸ್ವಾತಂತ್ರ್ಯೋತ್ಸವಕ್ಕೆ ಸಿದ್ಧತೆ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಳವಡಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದಾದ್ಯಂತ ಸರ್ಕಾರ ಅದ್ಧೂರಿಯಾಗಿ ಆಚರಿಸಲಿದೆ. ಮುಂದಿನ ನಮ್ಮ ದೇಶದ ಭವಿಷ್ಯ ನಮ್ಮ ಜನತೆಯ ಕೈಯಲ್ಲಿದೆ. ಹರ್ ಘರ್ ತಿರಂಗಕ್ಕೆ ಕಾಂಗ್ರೆಸ್ ಟೀಕೆ ಮಾಡುತ್ತಿರುವ ವಿಚಾರಕ್ಕೆ ಕಿಡಿಕಾರಿದರು.


    Provided by
    Provided by

    ತ್ರಿವರ್ಣ ಧ್ವಜ ತ್ಯಾಗ, ಬಲಿದಾನ, ಹೋರಾಟದಿಂದ ಸಿಕ್ಕಿರುವುದು. ಸ್ವಾತಂತ್ರ್ಯ ಪೂರ್ವದಲ್ಲಿ ಹಿರಿಯರು ಹೋರಾಟ ಮಾಡಿರುವ ಫಲ. ಸ್ವಾತಂತ್ರ್ಯ ಹೋರಾಟವನ್ನು ತಿರುಚದೆ ಸತ್ಯಾಸತ್ಯತೆ ತಿಳಿಸಬೇಕಿದೆ. ತ್ರಿವರ್ಣ ಧ್ವಜದಲ್ಲಿ ಭಾರತದ ಏಕತೆ, ಶಕ್ತಿ, ಸ್ವಾತಂತ್ರ್ಯ, ಭವಿಷ್ಯ ಎಲ್ಲವೂ ಅಡಗಿದೆ. ಅದರ ಬಗ್ಗೆ ವಿರೋಧ ಮಾಡುವುದು, ಟೀಕೆ ಮಾಡುವುದು ದೇಶ ವಿರೋಧಿ ಕೃತ್ಯದಂತೆ. ಅಂತಹ ಕೀಳುಮಟ್ಟದ ಮಾತಿಗೆ ಜನತೆ ಬೆಲೆ ಕೊಡುವುದಿಲ್ಲ.

    ಜನ ಮತ್ತಷ್ಟು ಸ್ಪೂರ್ತಿ, ಪ್ರೇರಣೆಯಿಂದ ಆಚರಣೆ ಮಾಡುತ್ತಾರೆ. ಸ್ವಾತಂತ್ರ್ಯದ ಬಗ್ಗೆ ಕೆಲವರಿಗೆ ಇತಿಹಾಸ ಗೊತ್ತಿಲ್ಲ. ಕೆಲವರು ಅದನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‍ನವರು ತಿರಂಗ ಯಾತ್ರೆ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

    ಹರ್ ಘರ್ ತಿರಂಗವನ್ನು ಅದ್ಧೂರಿ, ವಿಜೃಂಭಣೆಯಿಂದ ಆಚರಿಸುತ್ತೇವೆ. ಬಾವುಟದ ಬಗ್ಗೆ ಕೀಳರಿಮೆಯಿಂದ ಮಾತನಾಡಬಾರದು. ಬಾವುಟ ದೇಶವನ್ನು ಒಗ್ಗೂಡಿಸುವ ಸಂಕೇತ. ಬಾವುಟ ಹಿಡಿದ ದೇಶಪ್ರೇಮಿಗಳನ್ನು ಯಾರೂ ಟೀಕೆ ಮಾಡಬಾರದು. ಕಾಂಗ್ರೆಸ್ ಟೀಕೆಗಳಿಗೆ ಜನರು ಕಿವಿಕೊಡುವುದಿಲ್ಲ ಎಂದು ತಿಳಿಸಿದರು.

    ಮಳೆ ಹಾನಿ ಪರಿಹಾರಕ್ಕೆ ಪ್ರತಿಕ್ರಿಯಿಸಿ ಮಳೆಹಾನಿ ಸಂಬಂಧ ಸೂಕ್ತ ಪರಿಹಾರ ನೀಡಲಾಗುವುದು. ನೀರು ನುಗ್ಗಿದ್ದಕ್ಕೆ ಹತ್ತು ಸಾವಿರ, ಪೂರ್ಣ ಬಿದ್ದಿದ್ದಕ್ಕೆ ಮೊದಲ ಹಂತದಲ್ಲಿ ಪರಿಹಾರ ನೀಡುತ್ತಿದ್ದೇವೆ. ರಸ್ತೆಗಳು, ಸೇತುವೆಗಳಿಗೆ ಹಾನಿಯಾಗಿದೆ. ಅದರ ರಿಪೇರಿಗೆ ಹಣ ಬಿಡುಗಡೆಯಾಗಿದೆ. ಬೆಳೆ ಹಾನಿ ಸಂಬಂಧ ಸಮೀಕ್ಷೆ ನಡೆಸಲಾಗುತ್ತಿದೆ. ವರದಿ ಬಂದ ತಕ್ಷಣ ಎಲ್ಲ ಪರಿಹಾರಗಳನ್ನು ನೀಡಲಾಗುವುದು. ಇದಕ್ಕಾಗಿ ಎಲ್ಲ ರೀತಿಯ ಸಿದ್ಧತೆಯಾಗಿದೆ ಎಂದು ತಿಳಿಸಿದರು.

    ಒಮಿಕ್ರಾನ್ ರೂಪಾಂತರ ತಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೇಂದ್ರದಿಂದ ಸೂಚನೆ ಬರುವ ಮುನ್ನವೇ ನಾವು ಎಚ್ಚೆತ್ತುಕೊಂಡಿದ್ದೇವೆ. ನಿರಂತರವಾಗಿ ಅದರ ಕುರಿತು ಸಂಶೋಧನೆ ನಡೆಯುತ್ತಿದೆ. ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಆತಂಕವಿಲ್ಲ ಎಂದು ಸ್ಪಷ್ಟಪಡಿಸಿದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.