nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನಲ್ಲಿ ಸಂಭ್ರಮದ 71ನೇ ಕನ್ನಡ ರಾಜ್ಯೋತ್ಸವ: 71 ಸಾಧಕರಿಗೆ ಪ್ರಶಸ್ತಿ ಪ್ರದಾನ

    November 1, 2026

    ಚೋರನೂರು: ಬಾಲ್ಯವಿವಾಹ ತಡೆ ಹಾಗೂ ಪೋಕ್ಸೊ ಕಾಯ್ದೆ ಜಾಗೃತಿ |  ಶಿಕ್ಷಣಕ್ಕೆ ಆದ್ಯತೆ ನೀಡಲು ವಿದ್ಯಾರ್ಥಿಗಳಿಗೆ ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆ

    November 1, 2026

    ‘ನಮ್ಮ ತುಮಕೂರು ಡಿಜಿಟಲ್ ಮಾಧ್ಯಮ’ದ 5ನೇ ವಾರ್ಷಿಕೋತ್ಸವ: 5 ಸಾರ್ಥಕ ವರ್ಷಗಳು!

    November 1, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿನಲ್ಲಿ ಸಂಭ್ರಮದ 71ನೇ ಕನ್ನಡ ರಾಜ್ಯೋತ್ಸವ: 71 ಸಾಧಕರಿಗೆ ಪ್ರಶಸ್ತಿ ಪ್ರದಾನ
    • ಚೋರನೂರು: ಬಾಲ್ಯವಿವಾಹ ತಡೆ ಹಾಗೂ ಪೋಕ್ಸೊ ಕಾಯ್ದೆ ಜಾಗೃತಿ |  ಶಿಕ್ಷಣಕ್ಕೆ ಆದ್ಯತೆ ನೀಡಲು ವಿದ್ಯಾರ್ಥಿಗಳಿಗೆ ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆ
    • ‘ನಮ್ಮ ತುಮಕೂರು ಡಿಜಿಟಲ್ ಮಾಧ್ಯಮ’ದ 5ನೇ ವಾರ್ಷಿಕೋತ್ಸವ: 5 ಸಾರ್ಥಕ ವರ್ಷಗಳು!
    • ಭಾಲ್ಕಿಯಲ್ಲಿ SBI ಎಟಿಎಂ ದರೋಡೆ ಪ್ರಕರಣ: ಹರಿಯಾಣ, ರಾಜಸ್ಥಾನ ಮೂಲದ ನಾಲ್ವರು ಅಂತರರಾಜ್ಯ ಕಳ್ಳರ ಬಂಧನ
    • ಇಂದಿಗೂ ಜೀವಂತವಾಗಿದ್ದಾನೆಯೇ ಅಶ್ವತ್ಥಾಮ? ಸಾವಿರಾರು ವರ್ಷಗಳ ಶಾಪ, ಇಂದಿಗೂ ಕೇಳಿಬರುವ ನಿಗೂಢ ಕಥೆಗಳು ಇಲ್ಲಿವೆ!
    • ದೇಹದ ಮೇಲೆ ಕಾಣಿಸಿಕೊಳ್ಳುವ ಕೊಬ್ಬಿನ ಗಡ್ಡೆಗಳು ಏಕೆ ಬರುತ್ತವೆ? ಮನೆಮದ್ದುಗಳಿಂದ ಕರಗುತ್ತವೆಯೇ?
    • ರಾಮನ ನೆರಳಾಗಿ ಬದುಕಿದ ಲಕ್ಷ್ಮಣನಿಗೆ ಕೊನೆಗೆ ಸಿಕ್ಕ ಶಿಕ್ಷೆಯೇನು? ರಾಮಾಯಣದ ಈ ಕಥೆ ನಿಮಗೆ ಗೊತ್ತೇ?
    • ನವೆಂಬರ್ 1: ನಮ್ಮತುಮಕೂರು ಡಿಜಿಟಲ್ ಮಾಧ್ಯಮಕ್ಕೆ 5 ವರ್ಷಗಳ ಸಂಭ್ರಮ | ಸಂಪಾದಕೀಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹರ್ ಘರ್ ತಿರಂಗಾ ಕುರಿತು ಕಾಂಗ್ರೆಸ್ ಟೀಕೆಗೆ ಸಿಎಂ ತಿರುಗೇಟು
    ರಾಜ್ಯ ಸುದ್ದಿ August 12, 2022

    ಹರ್ ಘರ್ ತಿರಂಗಾ ಕುರಿತು ಕಾಂಗ್ರೆಸ್ ಟೀಕೆಗೆ ಸಿಎಂ ತಿರುಗೇಟು

    By adminAugust 12, 2022No Comments2 Mins Read

    ಎಪ್ಪತ್ತೈದನೆ ಸ್ವಾತಂತ್ರ್ಯೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಅದ್ಧೂರಿಯಾಗಿ ಆಚರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮೈಸೂರಿನಲ್ಲಿಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ಮಾಧ್ಯಮಗಳೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಹೇಳಿದರು.

    75ನೇ ಸ್ವಾತಂತ್ರ್ಯೋತ್ಸವಕ್ಕೆ ಸಿದ್ಧತೆ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಳವಡಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದಾದ್ಯಂತ ಸರ್ಕಾರ ಅದ್ಧೂರಿಯಾಗಿ ಆಚರಿಸಲಿದೆ. ಮುಂದಿನ ನಮ್ಮ ದೇಶದ ಭವಿಷ್ಯ ನಮ್ಮ ಜನತೆಯ ಕೈಯಲ್ಲಿದೆ. ಹರ್ ಘರ್ ತಿರಂಗಕ್ಕೆ ಕಾಂಗ್ರೆಸ್ ಟೀಕೆ ಮಾಡುತ್ತಿರುವ ವಿಚಾರಕ್ಕೆ ಕಿಡಿಕಾರಿದರು.

    ತ್ರಿವರ್ಣ ಧ್ವಜ ತ್ಯಾಗ, ಬಲಿದಾನ, ಹೋರಾಟದಿಂದ ಸಿಕ್ಕಿರುವುದು. ಸ್ವಾತಂತ್ರ್ಯ ಪೂರ್ವದಲ್ಲಿ ಹಿರಿಯರು ಹೋರಾಟ ಮಾಡಿರುವ ಫಲ. ಸ್ವಾತಂತ್ರ್ಯ ಹೋರಾಟವನ್ನು ತಿರುಚದೆ ಸತ್ಯಾಸತ್ಯತೆ ತಿಳಿಸಬೇಕಿದೆ. ತ್ರಿವರ್ಣ ಧ್ವಜದಲ್ಲಿ ಭಾರತದ ಏಕತೆ, ಶಕ್ತಿ, ಸ್ವಾತಂತ್ರ್ಯ, ಭವಿಷ್ಯ ಎಲ್ಲವೂ ಅಡಗಿದೆ. ಅದರ ಬಗ್ಗೆ ವಿರೋಧ ಮಾಡುವುದು, ಟೀಕೆ ಮಾಡುವುದು ದೇಶ ವಿರೋಧಿ ಕೃತ್ಯದಂತೆ. ಅಂತಹ ಕೀಳುಮಟ್ಟದ ಮಾತಿಗೆ ಜನತೆ ಬೆಲೆ ಕೊಡುವುದಿಲ್ಲ.

    ಜನ ಮತ್ತಷ್ಟು ಸ್ಪೂರ್ತಿ, ಪ್ರೇರಣೆಯಿಂದ ಆಚರಣೆ ಮಾಡುತ್ತಾರೆ. ಸ್ವಾತಂತ್ರ್ಯದ ಬಗ್ಗೆ ಕೆಲವರಿಗೆ ಇತಿಹಾಸ ಗೊತ್ತಿಲ್ಲ. ಕೆಲವರು ಅದನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‍ನವರು ತಿರಂಗ ಯಾತ್ರೆ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

    ಹರ್ ಘರ್ ತಿರಂಗವನ್ನು ಅದ್ಧೂರಿ, ವಿಜೃಂಭಣೆಯಿಂದ ಆಚರಿಸುತ್ತೇವೆ. ಬಾವುಟದ ಬಗ್ಗೆ ಕೀಳರಿಮೆಯಿಂದ ಮಾತನಾಡಬಾರದು. ಬಾವುಟ ದೇಶವನ್ನು ಒಗ್ಗೂಡಿಸುವ ಸಂಕೇತ. ಬಾವುಟ ಹಿಡಿದ ದೇಶಪ್ರೇಮಿಗಳನ್ನು ಯಾರೂ ಟೀಕೆ ಮಾಡಬಾರದು. ಕಾಂಗ್ರೆಸ್ ಟೀಕೆಗಳಿಗೆ ಜನರು ಕಿವಿಕೊಡುವುದಿಲ್ಲ ಎಂದು ತಿಳಿಸಿದರು.

    ಮಳೆ ಹಾನಿ ಪರಿಹಾರಕ್ಕೆ ಪ್ರತಿಕ್ರಿಯಿಸಿ ಮಳೆಹಾನಿ ಸಂಬಂಧ ಸೂಕ್ತ ಪರಿಹಾರ ನೀಡಲಾಗುವುದು. ನೀರು ನುಗ್ಗಿದ್ದಕ್ಕೆ ಹತ್ತು ಸಾವಿರ, ಪೂರ್ಣ ಬಿದ್ದಿದ್ದಕ್ಕೆ ಮೊದಲ ಹಂತದಲ್ಲಿ ಪರಿಹಾರ ನೀಡುತ್ತಿದ್ದೇವೆ. ರಸ್ತೆಗಳು, ಸೇತುವೆಗಳಿಗೆ ಹಾನಿಯಾಗಿದೆ. ಅದರ ರಿಪೇರಿಗೆ ಹಣ ಬಿಡುಗಡೆಯಾಗಿದೆ. ಬೆಳೆ ಹಾನಿ ಸಂಬಂಧ ಸಮೀಕ್ಷೆ ನಡೆಸಲಾಗುತ್ತಿದೆ. ವರದಿ ಬಂದ ತಕ್ಷಣ ಎಲ್ಲ ಪರಿಹಾರಗಳನ್ನು ನೀಡಲಾಗುವುದು. ಇದಕ್ಕಾಗಿ ಎಲ್ಲ ರೀತಿಯ ಸಿದ್ಧತೆಯಾಗಿದೆ ಎಂದು ತಿಳಿಸಿದರು.

    ಒಮಿಕ್ರಾನ್ ರೂಪಾಂತರ ತಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೇಂದ್ರದಿಂದ ಸೂಚನೆ ಬರುವ ಮುನ್ನವೇ ನಾವು ಎಚ್ಚೆತ್ತುಕೊಂಡಿದ್ದೇವೆ. ನಿರಂತರವಾಗಿ ಅದರ ಕುರಿತು ಸಂಶೋಧನೆ ನಡೆಯುತ್ತಿದೆ. ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಆತಂಕವಿಲ್ಲ ಎಂದು ಸ್ಪಷ್ಟಪಡಿಸಿದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ

    October 30, 2026

    ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ

    October 30, 2026

    ‘ಐ ಲವ್ ಯೂ ಚಿನ್ನು’ ಎಂದು ಮೆಸೇಜ್ ಮಾಡುತ್ತಿದ್ದ ಉಪನ್ಯಾಸಕನ ಗ್ರಹಚಾರ ಬಿಡಿಸಿದ ವಿದ್ಯಾರ್ಥಿನಿಯರು!

    October 30, 2026

    Comments are closed.

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿನಲ್ಲಿ ಸಂಭ್ರಮದ 71ನೇ ಕನ್ನಡ ರಾಜ್ಯೋತ್ಸವ: 71 ಸಾಧಕರಿಗೆ ಪ್ರಶಸ್ತಿ ಪ್ರದಾನ

    November 1, 2026

    ತುಮಕೂರು: ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ…

    ಚೋರನೂರು: ಬಾಲ್ಯವಿವಾಹ ತಡೆ ಹಾಗೂ ಪೋಕ್ಸೊ ಕಾಯ್ದೆ ಜಾಗೃತಿ |  ಶಿಕ್ಷಣಕ್ಕೆ ಆದ್ಯತೆ ನೀಡಲು ವಿದ್ಯಾರ್ಥಿಗಳಿಗೆ ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆ

    November 1, 2026

    ‘ನಮ್ಮ ತುಮಕೂರು ಡಿಜಿಟಲ್ ಮಾಧ್ಯಮ’ದ 5ನೇ ವಾರ್ಷಿಕೋತ್ಸವ: 5 ಸಾರ್ಥಕ ವರ್ಷಗಳು!

    November 1, 2026

    ಭಾಲ್ಕಿಯಲ್ಲಿ SBI ಎಟಿಎಂ ದರೋಡೆ ಪ್ರಕರಣ: ಹರಿಯಾಣ, ರಾಜಸ್ಥಾನ ಮೂಲದ ನಾಲ್ವರು ಅಂತರರಾಜ್ಯ ಕಳ್ಳರ ಬಂಧನ

    November 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.