ನವದೆಹಲಿ/ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಗಳ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಚುನಾವಣೆಗೆ ಬಳಸಿಕೊಂಡಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.
ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಮಾತನಾಡಿದ ಅವರು, ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿದ್ದಾರೆ. ಆದರೆ, ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ 136 ಸ್ಥಾನ ಗೆದ್ದಿದೆ. ಅದರಿಂದ ಉಪಯೋಗವೇನು? ಕಾಂಗ್ರೆಸ್ ಯಾವ ರೀತಿ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಅಲ್ಲಿರುವುದು ಕಡು ಭ್ರಷ್ಟ ಸರ್ಕಾರ. ಪ್ರಗತಿಶೀಲ ರಾಜ್ಯ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಹಾಳು ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನೂ ಚುನಾವಣೆಗೆ ಬಳಸಿಕೊಂಡಿದ್ದಾರೆ. ಯಾವುದೇ ಅಂಜಿಕೆ ಇಲ್ಲದೆ ಭ್ರಷ್ಟಾಚಾರದಲ್ಲಿ ತೊಡಗಿರುವ ಈ ಸರ್ಕಾರದ ಕೆಟ್ಟ ಆಡಳಿತದಿಂದ ಅನೇಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾನು ಸತ್ಯವನ್ನು ಹೇಳಿದರೆ, ನಿಮಗೆ ಅರಗಿಸಿಕೊಳ್ಳುವುದು ತುಂಬಾ ಕಷ್ಟ ಎಂದು ಗುಡುಗಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx