ಬೆಳಗಾವಿ: ರಾಜ್ಯದ ಜನರ ವಿಶ್ವಾಸ ಕಳೆದು ಕೊಂಡಿರುವ ಕಾಂಗ್ರೆಸ್ ಪಕ್ಷವೂ ಶೀಘ್ರದಲ್ಲೇ ವಸ್ತು ಸಂಗ್ರಹಾಲಯವಾಗಿ ಬದಲಾಗಲಿದೆ ಎಂದು ಸಚಿವ ಅಶ್ವತ್ಥ ನಾರಾಯಣ ವ್ಯಂಗ್ಯವಾಡಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ ಪ್ರತಿಯೊಬ್ಬ ನಾಯಕನಿಗೂ ಅಧಿಕಾರದ ದುರಾಸೆಯಿದೆ. ಹೀಗಾಗಿ ಕಾಂಗ್ರೆಸ್ ಸದ್ಯ ಒಡೆದ ಮನೆಯಾಗಿದೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ನಾಯಕರು ರಾಜಕೀಯದಿಂದ ನಿವೃತ್ತಿ ಹೊಂದಬೇಕು ಮತ್ತು ಇತರರನ್ನು ಆಶೀರ್ವದಿಸುತ್ತಾ ಕುಳಿತುಕೊಳ್ಳಬೇಕು ಎಂದು ಸಚಿವರು ಹೇಳಿದರು.
ಕಾಂಗ್ರೆಸ್ ನಾಯಕರು ತೋರಿಕೆಗೆ ಮಾತ್ರ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ ಎಂದು ಇದೇ ವೇಳೆ ಅಶ್ವತ್ಥ ನಾರಾಯಣ ಆರೋಪಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz