ಬೆಂಗಳೂರು: ಕಾಂಗ್ರೆಸ್ ಪಕ್ಷ ಯಾರೊಬ್ಬರ ಮನೆ ಆಸ್ತಿಯಲ್ಲ, ಇದು ನಮ್ಮ ಶಕ್ತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕಾಂಗ್ರೆಸ್ ನಲ್ಲಿ ದಲಿತ ಮುಖ್ಯಮಂತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಯಾಕೆ ಆಗ್ಬಾರ್ದು..? ನಮ್ಮ ಪಕ್ಷದಲ್ಲಿ ಯಾರು ಬೇಕಾದರೂ ಸಿಎಂ ಆಗಬಹುದು.
ಕಾಂಗ್ರೆಸ್ ನಲ್ಲಿ ಎಲ್ಲವೂ ಸಾಧ್ಯವಾಗುತ್ತದೆ. ನಾವು ಬೇರೆಯವರ ಹಾಗೆ ಮುಸ್ಲಿಂ ಸಿಎಂ ಮಾಡ್ತೀವಿ ಎಂದು ಹೇಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಟಾಂಗ್ ನೀಡಿದರು.
ದಲಿತ ಎಂತಾ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ನೀಡಿಲ್ಲ. ಅವರು ಪಕ್ಷದಲ್ಲಿ ಅತ್ಯಂತ ಹಿರಿಯ ಹಾಗೂ ಅನುಭವಿ ರಾಜಕಾರಣಿ ಹಾಗೂ ಸಮರ್ಥ ರಾಜಕಾರಣಿ ಎಂಬ ಕಾರಣಕ್ಕೆ ಅಧ್ಯಕ್ಷ ಹುದ್ದೆ ನೀಡಲಾಗಿದೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy