ಬಳ್ಳಾರಿ: ಒಂದು ಕೈಯಲ್ಲಿ ಕೊಟ್ಟಂತೆ ಮಾಡಿ ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವುದು ಕಾಂಗ್ರೆಸ್ ನ ಜಾಯಮಾನ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆಯ ಸುಮಾರು ರೂ. 25,000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿದ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಬಳ್ಳಾರಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ದ
ಮೊದಲ ವರ್ಷ 34 ಸಾವಿರ ಕೋಟಿ ದಲಿತರಿಗೆ ಮೀಸಲಿಟ್ಟಿದ್ದಾಗಿ ಮುಖ್ಯಮಂತ್ರಿಗಳು ಭಾಷಣ ಮಾಡಿದ್ದರು. ಇದು ಸುಳ್ಳು; ಹೇಳಿದ್ದು ಮಾತ್ರ. ಅದರಲ್ಲಿ 11,144 ಕೋಟಿ ಮೊತ್ತವನ್ನು ಗ್ಯಾರಂಟಿಗೆ ಕೊಟ್ಟಿದ್ದಾರೆ. ಎರಡನೇ ವರ್ಷದಲ್ಲಿ ಇಲ್ಲಿಂದ 14,366 ಕೋಟಿಯನ್ನು ಗ್ಯಾರಂಟಿಗಳಿಗೆ ಕೊಟ್ಟರು ಎಂದು ದೂರಿದರು.
ದಲಿತರ ಹಣವನ್ನು ಈ ಸರಕಾರ ದುರುಪಯೋಗ ಮಾಡುತ್ತಿದೆ ಎಂಬ ವಿಚಾರವನ್ನು ತಿಳಿಸಲು ಮಾನ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು 14 ತಂಡಗಳನ್ನು ರಚಿಸಿದ್ದಾರೆ. 28 ಸಂಸದೀಯ ಕ್ಷೇತ್ರಗಳಿದ್ದು, ಒಂದೊಂದು ತಂಡವು 2 ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಿದೆ ಎಂದು ವಿವರ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4