nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ನವರದ್ದು ನುಡಿದಂತೆ ನಡೆದ ಸರಕಾರ ಅಲ್ಲ: ಛಲವಾದಿ ನಾರಾಯಣಸ್ವಾಮಿ ಟೀಕೆ
    ರಾಜ್ಯ ಸುದ್ದಿ November 22, 2023

    ಕಾಂಗ್ರೆಸ್ ನವರದ್ದು ನುಡಿದಂತೆ ನಡೆದ ಸರಕಾರ ಅಲ್ಲ: ಛಲವಾದಿ ನಾರಾಯಣಸ್ವಾಮಿ ಟೀಕೆ

    By adminNovember 22, 2023No Comments2 Mins Read
    narayanaswami

    ಬೆಂಗಳೂರು: ಕಾಂಗ್ರೆಸ್ ನವರದ್ದು ನುಡಿದಂತೆ ನಡೆದ ಸರಕಾರ ಅಲ್ಲ. ಕಾಂಗ್ರೆಸ್ ಸರಕಾರವು 6 ತಿಂಗಳ ಆಡಳಿತ ಸಂಬಂಧ ಕೊಟ್ಟಿರುವ ಅಂಕಿಅಂಶಗಳು ಪ್ರಶ್ನಾರ್ಥಕವಾಗಿವೆ ಎಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರವು ಚುನಾವಣೆ ಸಂದರ್ಭದಲ್ಲಿ ಜನರಿಗೆ 5 ಗ್ಯಾರಂಟಿಗಳನ್ನು ನೀಡಿತ್ತು. ಕೊಟ್ಟ ಮಾತಿನಂತೆ ಅಥವಾ ನುಡಿದಂತೆ ನಡೆದಿದ್ದೇವೆ ಎಂದು ನಿನ್ನೆ ದೊಡ್ಡ ದೊಡ್ಡ ಜಾಹೀರಾತು ನೀಡಿದ್ದಾರೆ. ಅಂಕಿಅಂಶಗಳನ್ನೂ ಕೊಟ್ಟಿದ್ದಾರೆ. ಆದರೆ, ಎಷ್ಟೋ ಜನರಿಗೆ ಅಕ್ಕಿಗೆ ಕೊಡುವ ಹಣ ಸಿಕ್ಕಿಲ್ಲ. ಮಹಿಳೆಯರಿಗೆ 2 ಸಾವಿರ ರೂಪಾಯಿ ಒಂದು ಕಂತು ಮಾತ್ರ ಸಿಕ್ಕಿದೆ. ಇನ್ನೂ 3 ತಿಂಗಳು ಬಂದಿಲ್ಲ. ವಿದ್ಯುತ್ 200 ಯೂನಿಟ್ ಎಂದಿದ್ದರು. 200 ಯೂನಿಟ್ ಬದಲು ವರ್ಷದ ಸರಾಸರಿ ಯೂನಿಟ್ ಕೊಡುತ್ತಿದ್ದಾರೆ ಎಂದು ಟೀಕಿಸಿದರು. ಯುವನೀತಿ ಇನ್ನೂ ಪ್ರಾರಂಭಿಸಿಲ್ಲ. ಎಂದು ಎಂದು ಆರೋಪಿಸಿದರು.

    ಕಾಂಗ್ರೆಸ್ ಪಕ್ಷದ ಆಶ್ವಾಸನೆಗಳು ಜನರಿಗೆ ತಲುಪುತ್ತಿಲ್ಲ. ಕಾಂಗ್ರೆಸ್ ವೈಫಲ್ಯಗಳನ್ನು ನಾವು ತಿಳಿಸುತ್ತಿದ್ದೇವೆ ಎಂದ ಅವರು, ಬಿಜೆಪಿಯವರು ಕಾಂಗ್ರೆಸ್ ಯೋಜನೆಗಳನ್ನು ನಕಲು ಮಾಡಿಲ್ಲ. ಬದಲಾಗಿ ಕಾಂಗ್ರೆಸ್ಸೇ ನಮ್ಮ ಯೋಜನೆಗಳ ನಕಲು ಮಾಡಿದೆ. ನಾವು 12 ಕೋಟಿ ಶೌಚಾಲಯಗಳನ್ನು ಕಟ್ಟಿಸಿಕೊಟ್ಟಿದ್ದೇವೆ. ಇದು ಸಾಂದರ್ಭಿಕವಾಗಿ ಮಾಡಬೇಕಾದ ಕೆಲಸ. 1.25 ಲಕ್ಷ ಕಿಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿದ್ದೇವೆ. ಅನೇಕ ಟನೆಲ್ ಮಾಡಿದ್ದೇವೆ. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ 6 ಸಾವಿರವನ್ನು ಪ್ರಧಾನಿಯವರು ವರ್ಗಾಯಿಸುತ್ತಿದ್ದಾರೆ. ರಾಜ್ಯದಲ್ಲೂ 4 ಸಾವಿರವನ್ನು ಹಾಕುತ್ತಿದ್ದು, ಅದನ್ನು ನೀವು ಬಂದ್ ಮಾಡಿದ್ದೀರಿ. ಅದು ಗ್ಯಾರಂಟಿ ಎಂದಿಲ್ಲ ಎಂದು ವಿಶ್ಲೇಷಿಸಿದರು.

    ಗರೀಬ್ ಅನ್ನ ಯೋಜನೆಯಡಿ 80 ಕೋಟಿ ಜನರಿಗೆ ಪಡಿತರ ಕೊಡಲಾಗಿದೆ. ಅದೇನೂ ಗ್ಯಾರಂಟಿ ಅಲ್ಲ; ಪ್ರಣಾಳಿಕೆಯಲ್ಲೂ ಇರಲಿಲ್ಲ. 220 ಕೋಟಿ ಕೋವಿಡ್ ಲಸಿಕೆಯನ್ನು ಉಚಿತವಾಗಿ ಕೊಡಲಾಯಿತು. ಅದೇನೂ ಗ್ಯಾರಂಟಿ ಯೋಜನೆ ಅಲ್ಲ. ಉಜ್ವಲ ಯೋಜನೆಯಡಿ 9.6 ಕೋಟಿ ಸಿಲಿಂಡರ್ ಗಳನ್ನು ಉಚಿತವಾಗಿ ಬಡವರಿಗೆ ನೀಡಿದ್ದೇವೆ. ಅದನ್ನು ಗ್ಯಾರಂಟಿ ಎನ್ನಲಿಲ್ಲ ಎಂದು ವಿವರಿಸಿದರು.

    ಮುಖ್ಯಮಂತ್ರಿಗಳು ದೇಶದ ಪ್ರಧಾನಿಯವರಿಗೆ ಗೌರವ ಕೊಡುವುದನ್ನು ಕಲಿತುಕೊಳ್ಳಬೇಕು. ನಾಲಿಗೆ ಬಿಗಿಹಿಡಿದು ಮಾತನಾಡಬೇಕು ಎಂದು ಆಗ್ರಹಿಸಿದರು. ಪ್ರಧಾನಿ ಮೋದಿಯವರ ಆಡಳಿತದಡಿ ದೇಶ ಸುಭದ್ರವಾಗಿದೆ. ಅವರ ಕಾರ್ಯಕ್ಕೆ ದೇಶ, ವಿಶ್ವದಲ್ಲೇ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ನುಡಿದರು.

    ಎಸ್ಸಿಎಸ್ಪಿ–ಟಿಎಸ್ಪಿ ಬಜೆಟ್ನ ಶೇ 24ರಷ್ಟು ಕೊಡುವುದಾಗಿ ಹೇಳಿದ್ದೀರಿ. 3.25 ಲಕ್ಷ ಕೋಟಿಯ ಬಜೆಟ್ನಡಿ ನೀವೇ ಘೋಷಿಸಿದಂತೆ ಕೊಡುವುದಾದರೆ 72 ಸಾವಿರ ಕೋಟಿ ಕೊಡಬೇಕಿತ್ತು. ಬರಿಯ 34 ಸಾವಿರ ಕೋಟಿ ಕೊಟ್ಟಿದ್ದೀರಿ. ದಲಿತರ ಹಣ ಬೇರೆ ಕಡೆ ವರ್ಗಾವಣೆ ಮಾಡುವುದಿಲ್ಲ; 7 ಡಿ ರದ್ದು ಮಾಡುವುದಾಗಿ ಮಹದೇವಪ್ಪ ಹೇಳಿದ್ದರು. ಆದರೆ, ಗ್ಯಾರಂಟಿ ಸ್ಕೀಮಿಗೆ 11,700 ಕೋಟಿಯನ್ನು ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಿದ್ದೀರಿ ಎಂದು ಆಕ್ಷೇಪಿಸಿದರು.

    7 ಡಿ ರದ್ದು ಮಾಡುವ ಮನಸ್ಸಿದ್ದರೆ 11 ಸಾವಿರ ಕೋಟಿಗೂ ಹೆಚ್ಚು ಹಣವನ್ನು ವರ್ಗಾವಣೆ ಮಾಡಿ ದಲಿತರಿಗೆ ಮೋಸ ಮಾಡಿದ್ದೇಕೆ? ಇದಕ್ಕೆ ಮೊದಲು ಉತ್ತರ ಕೊಡಿ ಎಂದು ಸರಕಾರ ಮತ್ತು ಸಚಿವರನ್ನು ಒತ್ತಾಯಿಸಿದರು. ದಲಿತರಿಗೆ ಮಾಡಿದ ಮೋಸವನ್ನು ಸಹಿಸಲಾಗದು. ನೀವು ಹೇಳಿದಂತೆ ನಡೆಯುವುದಾದರೆ ನಿಗದಿತ ಯೋಜನೆಗೆ 11,700 ಕೋಟಿ ವಾಪಸ್ ಕೊಡಿ ಎಂದು ಆಗ್ರಹಿಸಿದರು. ನಾವು ಜನರನ್ನು ಎಚ್ಚರಿಸುತ್ತೇವೆ. ನಾವು ಹೋರಾಟ ಮುಂದುವರೆಸುತ್ತೇವೆ. ದಲಿತರಿಗೆ ಕಾಂಗ್ರೆಸ್ ಸರಕಾರ ಬಹಳಷ್ಟು ಅನ್ಯಾಯ ಮಾಡಿದೆ ಎಂದು ತಿಳಿಸಿದರು.


    Provided by
    Provided by
    admin
    • Website

    Related Posts

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ…

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.