ತುಮಕೂರು: ಡಿಸೆಂಬರ್ 10ರಂದು ನಡೆದಿದ್ದ ಸ್ಥಳೀಯ ಸಂಸ್ಥೆ ವಿಧಾನ ಪರಿಷತ್ ಚುನಾವಣೆಗೆ ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆರ್.ರಾಜೇಂದ್ರ ಮತಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.
ಪ್ರತಿಸ್ಪರ್ಧಿ ಬಿಜೆಪಿಯ ಲೋಕೇಶ್ ಗೌಡ, ಜೆಡಿಎಸ್ ಪಕ್ಷದ ಅಭ್ಯರ್ಥಿ ಅನಿಲ್ ಕುಮಾರ್ ಸೋಲನುಭವಿಸಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೊದಲ ಸುತ್ತಿನಲ್ಲಿ ಹಾಗೂ ಎರಡನೇ ಸುತ್ತಿನಲ್ಲಿ ಸಹ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಗೆಲುವಿನ ನಿರೀಕ್ಷೆಯನ್ನು ಮೊದಲೇ ಮೂಡಿಸಿದ್ದರು. ಕೊನೆಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್. ರಾಜೇಂದ್ರ ಅವರಿಗೆ ಮತದಾರರ ಒಲವು ಸಿಕ್ಕಿದೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಆರ್.ರಾಜೇಂದ್ರ ಪರ ಘಟಾನುಘಟಿ ನಾಯಕರುಗಳದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಾಕಷ್ಟು ಹಿರಿಯ ನಾಯಕರು ಜಿಲ್ಲೆಯಾದ್ಯಂತ ಭರ್ಜರಿ ಪ್ರಚಾರ ನಡೆಸಿದ್ದರು.
ಡಾ.ಜಿ.ಪರಮೇಶ್ವರ್ ಅವರು ವಿಶೇಷ ಮುತುವರ್ಜಿ ವಹಿಸಿ, ಬಿಡುವಿಲ್ಲದೇ ಪ್ರಚಾರ ನಡೆಸಿದ್ದು, ಆರ್.ರಾಜೇಂದ್ರ ಗೆಲುವಿಗೆ ಪ್ರಮುಖ ಕಾರಣವಾಗಿದ್ದಾರೆ. ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸುತ್ತಿದ್ದಂತೆಯೇ, ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700