nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!

    September 5, 2026

    ಬೀದರ್: 40 ವರ್ಷಗಳ ಬಳಿಕ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಆರಂಭವಾಯಿತು ಅಭಿವೃದ್ಧಿ ಕಾಮಗಾರಿ; ಪಿಡಿಒ ಕಾರ್ಯಕ್ಕೆ ಶ್ಲಾಘನೆ

    September 5, 2026

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    September 5, 2026
    Facebook Twitter Instagram
    ಟ್ರೆಂಡಿಂಗ್
    • ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!
    • ಬೀದರ್: 40 ವರ್ಷಗಳ ಬಳಿಕ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಆರಂಭವಾಯಿತು ಅಭಿವೃದ್ಧಿ ಕಾಮಗಾರಿ; ಪಿಡಿಒ ಕಾರ್ಯಕ್ಕೆ ಶ್ಲಾಘನೆ
    • ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
    • ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ
    • ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು:  ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ
    • ಬಳ್ಳಾರಿ: ಗ್ರಾಮ ಒನ್ ಫ್ರಾಂಚೈಸಿ ನೇಮಕಾತಿಗೆ ಅರ್ಜಿ ಆಹ್ವಾನ
    • ತಿಪಟೂರು ಬಿಜೆಪಿ ಟಿಕೆಟ್ ವಿಚಾರ ಪ್ರಸ್ತಾಪ ಅಪ್ರಸ್ತುತ: ಶ್ರೀ ರುದ್ರಮುನಿಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೇಸ್ ಕೋರ್ಸ್ ಆಯೋಜನೆಗೆ ಅನುಮತಿ ಕೋರಿರುವ ಮನವಿ ಪರಿಗಣಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    ರಾಜ್ಯ ಸುದ್ದಿ May 24, 2024

    ರೇಸ್ ಕೋರ್ಸ್ ಆಯೋಜನೆಗೆ ಅನುಮತಿ ಕೋರಿರುವ ಮನವಿ ಪರಿಗಣಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    By adminMay 24, 2024No Comments2 Mins Read
    high court

    ಬೆಂಗಳೂರು ಟರ್ಫ್ ಕ್ಲಬ್(ರೇಸ್ ಕೋರ್ಸ್)ನಲ್ಲಿ ಕುದುರೆ ಪಂದ್ಯಾವಳಿಗಳ ಆಯೋಜನೆಗೆ ಅನುಮತಿ ಕೋರಿ ಸಲ್ಲಿಸಿರುವ ಮನವಿಯನ್ನು ಮುಂದಿನ 10 ದಿನಗಳಲ್ಲಿ ಕಾನೂನು ಬದ್ಧವಾಗಿ ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

    ಕುದುರೆ ಪಂದ್ಯಗಳ ಆಯೋಜನೆಗೆ ಪರವಾನಿಗೆ ನೀಡದ ಸರ್ಕಾರದ ಕ್ರಮ ಪ್ರಶ್ನಿಸಿ ಬೆಂಗಳೂರು ಟರ್ಫ್‌ಕ್ಲಬ್ ಲಿಮಿಟೆಡ್, ಕರ್ನಾಟಕ ರೇಸ್ ಹಾರ್ಸ್  ಓನರ್ಸ್ ಅಸೋಸಿಯೇಷನ್ ಮತ್ತು ಕರ್ನಾಟಕ ಟ್ರೈನರ್ಸ್ ಆಸೋಸಿಯೇಷನ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ಪೀಠ ಸೂಚನೆ ನೀಡಿದೆ.

    ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಕುದುರೆ ಪಂದ್ಯಾವಳಿಗಳ ಆಯೋಜನೆಗೆ ಪರವಾನಿಗೆ ಕುರಿತಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸುಮಾರು 2 ತಾಸು ಚರ್ಚೆಯಾಗಿದೆ. ಈ ಕುರಿತ ಇತರೆ ಪಾಲುದಾರರೊಂದಿಗೆ ಚರ್ಚೆಗಳು ನಡೆಸಬೇಕಾಗಿದ್ದು, ಅಕ್ರಮಗಳ ತಡೆಗಾಗಿ ಕಾನೂನು ಬದ್ಧವಾಗಿ ಷರತ್ತುಗಳನ್ನು ವಿಧಿಸಿ ಅನುಮತಿ ನೀಡಬೇಕಾಗಿದೆ. ಕುದುರೆ ಪಂದ್ಯಾವಳಿಗಳಲ್ಲಿ ಕೆಲ ಆಕ್ಷೇಪಾರ್ಹ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಬಂಧ ಸರ್ಕಾರದ ಗಮನಕ್ಕೆ ಬಂದಿದ್ದರಿಂದ ಪರವಾನಿಗೆ ವಿಳಂಬವಾಗಿದೆ. ಅಲ್ಲದೆ, 161 ವರ್ಷದಿಂದ ರೇಸ್ ಕೋರ್ಸ್‌ನಲ್ಲಿ ಕುದುರೆ ಪಂದ್ಯಾವಳಿಗಳು ನಡೆಯುತ್ತಿವೆ, ಕಳೆದ 72 ವರ್ಷಗಳಿಂದ ಪಂದ್ಯಗಳ ಆಯೋಜನೆಗೆ ಸರ್ಕಾರ ಪರವಾನಿಗೆ ನೀಡುತ್ತಿದೆ. ಆದರೆ, ಆಕ್ಷೇಪಾರ್ಹ ಚಟುವಟಿಕೆಗಳನ್ನು ಸರಿಪಡಿಸುವ ಉದ್ದೇಶದಿಂದ ವಿಳಂಬ ವಾಗಿದ್ದು, ಅಕ್ರಮಗಳಿಗೆ ಕಡಿವಾಣ ಹಾಕಿ ಕಾನೂನು ಬದ್ಧವಾಗಿ ಷರತ್ತುಗಳನ್ನು ವಿಧಿಸಿ ಪರವಾನಿಗೆ ನೀಡಬೇಕಾಗಿದ್ದು, ನಾಲ್ಕು ವಾರ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

    ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ನಾಲ್ಕುವಾರ ವಿಳಂವಾಗಲಿದ್ದು ಮುಂದಿನ 10 ದಿನಗಳಲ್ಲಿ ಅರ್ಜಿದಾರರ ಮನವಿಯನ್ನು ಪರಿಗಣಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಜೂನ್ 6ಕ್ಕೆ ಮುಂದೂಡಿತು.

    ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲರಾದ ಶ್ರೀರಂಗ, ರೇಸ್‌ಕೋರ್ಸ್ ಆಡಳಿತ ಮಂಡಳಿಯಲ್ಲಿ ಸರ್ಕಾರದ ಹಣಕಾಸು ಕಾರ್ಯದರ್ಶಿಗಳು, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸದಸ್ಯರಾಗಿದ್ದಾರೆ. ಕುದುರೆ ಪಂದ್ಯಗಳ ಆಯೋಜನೆಯ ಎಲ್ಲ ಚಟುವಟಿಕೆಗಳು ಸರ್ಕಾರಕ್ಕೆ ಗೊತ್ತಾಗುತ್ತಿರುತ್ತಿದ್ದು, ಅಕ್ರಮಗಳು ನಡೆಸುವ ಸಾಧ್ಯತೆಗಳು ಇಲ್ಲ ಎಂದು ವಿವರಿಸಿದರು.

    ತೆರಿಗೆ ವಂಚನೆಗಾಗಿ ಅಕ್ರಮವಾಗಿ ಬೆಟ್ಟಿಂಗ್ ಮಾಡಿದ ಆರೋಪದಲ್ಲಿ ಆರೋಪ ಪಟ್ಟಿ ದಾಖಲಿಸಿರುವ ಬುಕ್ಕಿಗಳ ಪರವಾನಿಗೆಯನ್ನು ರದ್ದು ಪಡಿಸುವುದಕ್ಕಾಗಿ ಮಂಡಳಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ, ಕುದುರೆ ಪಂದ್ಯಗಳ ಆಯೋಜನೆಯಲ್ಲಿ ಬುಕ್ಕಿ ಕಂಪೆನಿಗಳಿಗೆ ಯಾವುದೇ ಸಂಬಂಧವಿರುವುದಿಲ್ಲ. ಹೀಗಾಗಿ ಕುದರೆ ಪಂದ್ಯಗಳ ಆಯೋಜನೆಗೆ ಅವಕಾಶ ಕಲ್ಪಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ

    September 3, 2026

    ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ

    September 1, 2026

    ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ

    September 1, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!

    September 5, 2026

    ಹೊಳೆನರಸೀಪುರ: ಅಧಿಕಾರದ ಮದ, ಕಾನೂನು ಉಲ್ಲಂಘನೆ ಮತ್ತು ಅಧಿಕಾರಿಗಳ ದುರುಪಯೋಗ — ಹೊಳೆನರಸೀಪುರದ ತಾಲ್ಲೂಕು ಕಚೇರಿ ಮುಂಭಾಗದ ಸಾರ್ವಜನಿಕ ರಸ್ತೆ…

    ಬೀದರ್: 40 ವರ್ಷಗಳ ಬಳಿಕ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಆರಂಭವಾಯಿತು ಅಭಿವೃದ್ಧಿ ಕಾಮಗಾರಿ; ಪಿಡಿಒ ಕಾರ್ಯಕ್ಕೆ ಶ್ಲಾಘನೆ

    September 5, 2026

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    September 5, 2026

    ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ

    September 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.