ಬೀದರ್: ಬೀದರ್ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸೇವೆ ಸಲ್ಲಿಸುತ್ತಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ ಗ್ರೇಡ್–1 ಹಾಗೂ ಕಾರ್ಯದರ್ಶಿ ಇವರುಗಳಲ್ಲಿ ಬಹುತೇಕ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡು, ಸರ್ಕಾರದ ಅನುದಾನ ದುರ್ಬಳಕೆ, ಅನಧಿಕೃತವಾಗಿ ಹಾಗೂ ಕಾನೂನು ಬಾಹಿರವಾಗಿ ಇ–ಸ್ವತ್ತು ತಂತ್ರಾಂಶದ ಅಡಿಯಲ್ಲಿ ಡಿಜಿಟಲ್ ಖಾತೆ ವಿತರಿಸುವುದು, ಹೀಗೆ ನಾನಾ ರೀತಿಯ ಅವ್ಯವಹಾರದಲ್ಲಿ ತೊಡಿಸಿಕೊಂಡು ಸರ್ಕಾರಕ್ಕೆ ಕೋಟ್ಯಾಂತರ ಮೊತ್ತದ ಆರ್ಥಿಕ ನಷ್ಟವನ್ನು ಮಾಡುತ್ತಿದ್ದು, ಇದನ್ನು ಮನಗಂಡ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ಬಡೋಲೆ ಈ ಅವ್ಯವಹಾರಗಳಿಗೆ ಕಡಿವಾಣ ಹಾಕಿದ್ದಾರೆ.
ಭ್ರಷ್ಟಾಚಾರದಲ್ಲಿ ತೊಡಗಿರುವ ಪಿ.ಡಿ.ಓ, ಕಾರ್ಯದರ್ಶಿ ಗ್ರೇಡ್–1, ಕಾರ್ಯದರ್ಶಿ ಇವರ ಅಕ್ರಮ ಧಂದೆಯನ್ನು ತಡೆದಿರುವುದರಿಂದ ಆಕ್ರೋಶಗೊಂಡು ಸದರಿ ಭ್ರಷ್ಟ ಸರ್ಕಾರಿ ನೌಕರರು, ಹಣಬಲ ಬಳಸಿಕೊಂಡು ಜಿಲ್ಲೆಯ ವಿವಿಧ ಸಂಘಟನೆಗಳೊಂದಿಗೆ ಕೈಜೋಡಿಸಿ ನಿಷ್ಠಾವಂತ ಅಧಿಕಾರಿಯ ವಿರುದ್ಧ ಸುಳ್ಳು ಪ್ರಚಾರ ಮಾಡುವುದು, ಅಧಿಕಾರಿಗಳ ವರ್ಗಾವಣೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿ ಒಬ್ಬ ನಿಷ್ಠಾವಂತ ಅಧಿಕಾರಿಗಳಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಔರಾದ ತಾಲೂಕಿನ ಗ್ರಾಮ ಪಂಚಾಯತ ಸದಸ್ಯರಾದ ಪ್ರದೀಪ ಯನಗುಂದೆ ಆರೋಪಿಸಿದ್ದಾರೆ.
ಭ್ರಷ್ಟ ಸರ್ಕಾರಿ ನೌಕರರ ಸುಳ್ಳು ಪ್ರಚಾರ, ವಿವಿಧ ಸಂಘಟನೆಗಳ ಮನವಿಯನ್ನು ಪರಿಗಣಿಸದೇ ತರಾತುರಿಯಲ್ಲಿ ಯಾವುದೇ ಕ್ರಮ ಕೈಗೊಳ್ಳದೇ, ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಕುರಿತು ಕುಲಂಕುಶವಾಗಿ ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕೆಂದು ಅವರು ಪ್ರಕಟಣೆ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


