ತುಮಕೂರು: ನಗರದ ರಿಂಗ್ ರಸ್ತೆಯ ಶೆಡ್ ವೊಂದರಲ್ಲಿ ಅಕ್ರಮವಾಗಿ ಎರಡು ಕೆ.ಜಿ. ಗಾಂಜಾ ಇರಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ 70 ಸಾವಿರ ರೂ. ಮೌಲ್ಯದ ಎರಡು ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ. ನಯಿಂ ಅಹಮದ್, ರೋಷನ್ ಸಮೀರ್ ಬಂಧಿತ ಆರೋಪಿಗಳಾಗಿದ್ದಾರೆ.
ಕಾಲೇಜುಗಳ ಬಳಿ ಗಾಂಜಾ ಮಾರಾಟ ಮಾಡಲು ಆರೋಪಿಗಳು ಸಂಚು ರೂಪಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA