ತುಮಕೂರು: ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಎಚ್.ಎನ್.ಗಂಗಾಧರಯ್ಯ ಸಭಾಂಗಣದಲ್ಲಿ ರಾಜ್ಯಶಾಸ್ತ್ರ ವಿಭಾಗದಿಂದ 75ನೇ ವರ್ಷದ ಸಂವಿಧಾನ ದಿನಾಚರಣೆಯನ್ನು ಮಂಗಳವಾರ ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆಯನ್ನು ವಾಚನ ಮಾಡುವ ಮೂಲಕ ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೇಮಲತಾ ಪಿ. ಅವರು ಮಾತನಾಡಿ, ಪ್ರತಿಯೊಬ್ಬ ನಾಗರಿಕರು ಸಂವಿಧಾನಕ್ಕೆ ಬದ್ಧರಾಗಿರಬೇಕು. ದೇಶದ ರಕ್ಷಣೆಗೆ ಸಂವಿಧಾನ ತನ್ನದೇ ಆದ ಪಾತ್ರವನ್ನು ವಹಿಸುತ್ತಿದೆ ಎಂದರು.
ಶ್ರೀ ಸಿದ್ದಾರ್ಥ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸಿದ್ದರಾಜು ಕೆ. ಎಸ್.ಮಾತನಾಡಿ, ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವಿಸಬೇಕು, ಸಂವಿಧಾನವನ್ನು ಗೌರವಿಸದಿದ್ದರೆ ಸಮಾಜದಲ್ಲಿ ಶಾಂತಿ ನೆಲೆಸುವುದರ ಬದಲು ಅಶಾಂತಿ ಸೃಷ್ಟಿಯಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಸಂವಿಧಾನವನ್ನು ಪಾಲಿಸಬೇಕೆಂದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ತುಮಕೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಿವಯ್ಯ.ಎಂ ಅವರು ಮಾತನಾಡಿ, ಸಂವಿಧಾನವನ್ನ ರಚಿಸುವಂತಹ ಸಂದರ್ಭದಲ್ಲಿ ಬಾಬಾ ಸಾಹೇಬ ಅಂಬೇಡ್ಕರ್ ರವರು ಎದುರಿಸಿದ ಸವಾಲುಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಂಗಸ್ವಾಮಿ ಎಲ್ಲಾ ವಿಭಾಗದ ಮುಖ್ಯಸ್ಥರು, ಸಹಾಯಕ ಪ್ರಾಧ್ಯಾಪಕರು, ಹಾಗೂ ವಿದ್ಯಾರ್ಥಿಗಳು ಹಾಜರಾಗಿದ್ದರು.
ವರದಿ : ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q