ಬೀದರ್: ಸಂವಿಧಾನ ಅಂಗೀಕಾರ ದಿನಾಚರಣೆ ಹಾಗೂ ಸುಪ್ರೀಂ ಕೋರ್ಟಿನ ತೀರ್ಪಿನಂತೆ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ರಾಜ್ಯ ಸರ್ಕಾರ ಕೂಡಲೇ ಅನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ಮಟ್ಟದ ಬೃಹತ್ ಸಮಾವೇಶ ನಡೆಸಲು ಬೀದರ್ ಜಿಲ್ಲೆಯ ದಲಿತ ವಿಮೋಚನಾ ಸೇನೆ ಜಿಲ್ಲಾ ಸಮಿತಿ ಐಬಿಐಯಲ್ಲಿ ನಡೆಸಿದ ಸಭೆಯಲ್ಲಿ ತೀರ್ಮಾನ ಕೈಗೊಂಡಿತು.
ನವೆಂಬರ್ 29ರಂದು ಮಧ್ಯಾಹ್ನ 1 ಗಂಟೆಗೆ ನಿಸರ್ಗ ಕಲ್ಯಾಣ ಮಂಟಪ, ಹುಡಗಿ, ತಾಲೂಕು ಹುಮನಾಬಾದನಲ್ಲಿ ಜಿಲ್ಲಾ ಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಳ್ಳುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ದಯಾನಂದ( ವಕೀಲರು), ಜಿಲ್ಲಾಧ್ಯಕ್ಷರಾದ ಮಾರುತಿ ಸೂರ್ಯವಂಶಿ, ಯುವ ಘಟಕ ರಾಜ್ಯಾಧ್ಯಕ್ಷರಾದ ರಾಜು( ಕಾಣೆ ) ಜಿಲ್ಲಾ ಉಪಾಧ್ಯಕ್ಷರಾದ ಸುನಿಲ್ ಎಸ್. ಹುಡುಗಿ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ (ಮಾಳಗೆ) ಎಲ್ಲ ಪದಾಧಿಕಾರಿಗಳು ಉಪಸಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296