ಅಪಾರ್ಟ್‌ಮೆಂಟ್ ಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣೆ ಘಟಕ (ಎಸ್‌ಟಿಪಿ) ನಿರ್ಮಾಣವನ್ನು ಕಡ್ಡಾಯಗೊಳಿಸಬೇಕು. ಕೊಳಚೆ ನೀರನ್ನು ಶುದ್ದೀಕರಿಸಿ ಕೆರೆಗಳಿಗೆ ಹರಿಸಬೇಕು, ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಇಂಗು ಗುಂಡಿಗಳನ್ನು ನಿರ್ಮಿಸಬೇಕು.
ಬ್ಯಾಂಡ್ ಬೆಂಗಳೂರು ಯೋಜನೆಯಡಿ ‘ಜಲಸುರಕ್ಷಾ ಬೆಂಗಳೂರು’ ವಿಷಯಕ್ಕೆ ಸಂಬಂಧಿಸಿದಂತೆ ದಯಾನಂದ ಸಾಗರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಗುರುವಾರ ನಡೆದ ವಿಚಾರ ಸಂಕಿರಣದಲ್ಲಿ ತಜ್ಞರು ನೀಡಿದ ಸಲಹೆಗಳಿವು.
ಅಂತರ್ಜಲದ ಯಥೇಚ್ಛ ಬಳಕೆಯನ್ನು ನಿಯಂತ್ರಿಸಬೇಕು ಹಾಗೂ ನೀರಿನ ಮಿತ ಬಳಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಮತ್ತು ನೀರು ಪೂರೈಕೆಯ ಮೂಲವಾಗಿ ನಗರದ ಕೆರೆಗಳನ್ನು ಬಳಸಬೇಕು. ಅನಧಿಕೃತವಾಗಿ ಕೊಳವೆಬಾವಿ ಕೊರೆಯುವುದನ್ನು ತಡೆಯುವ ಜತೆಗೆ ಅಂತಹವರ ಮೇಲೆ ದುಪ್ಪಟ್ಟು ದಂಡ ವಿಧಿಸಬೇಕು ಎಂದು ತಜ್ಞರು ಅಭಿಪ್ರಾಯಪಟ್ಟರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


