ಬೆಂಗಳೂರು: ಮುಂದಿನ ಒಂದು ವರ್ಷದಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ 2.30 ಲಕ್ಷ ಮನೆಗಳ ನಿರ್ಮಾಣ ಮಾಡಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಬಿಜೆಪಿ ಎಂಎಲ್ ಸಿಗಳಾದ ಕೆ.ಎಸ್. ನವೀನ್ ಮತ್ತು ಎಸ್.ವಿ. ಸಂಕನೂರ್ ಅವರ ಪ್ರಶ್ನೆಗಳಿಗೆ ಉತ್ತರಿಸಿ ಮಾತನಾಡಿದ ಅವರು, ಅವರು, ಬಸವ ವಸತಿ, ಡಾ.ಬಿ.ಆರ್. ಅಂಬೇಡ್ಕರ್ ನಿವಾಸ, ದೇವರಾಜ ಅರಸು ವಸತಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಇತರ ವಸತಿ ಯೋಜನೆಗಳ ಅಡಿಯಲ್ಲಿ 9.5 ಲಕ್ಷ ಮನೆಗಳನ್ನು ನಿರ್ಮಿಸಬೇಕಾಗಿದೆ ಎಂದು ಹೇಳಿದರು.
ಕಾಮಗಾರಿ ಪೂರ್ಣಕ್ಕೆ 13,500 ಕೋಟಿ ರೂ.ಗಳಿಗೂ ಹೆಚ್ಚು ಅನುದಾನದ ಅಗತ್ಯವಿದೆ, ಹಂತ ಹಂತವಾಗಿ ನಿರ್ಮಾಣ ಕಾರ್ಯ ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುವುದು. ಮುಂದಿನ ಒಂದು ವರ್ಷದಲ್ಲಿ 2.30 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4