ಕೊರಟಗೆರೆ: ತಾಲ್ಲೂಕಿನ ತುಂಬಾಡಿ–ಜೋನಿಗರಹಳ್ಳಿ ಮಾರ್ಗದ ನೇಗಲಾಲ ಗ್ರಾಮದ ಶ್ರೀ ಕಾವಲಮ್ಮ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ಸಿ.ಸಿ. ರಸ್ತೆಯಾಗಿ ಅಭಿವೃದ್ಧಿಪಡಿಸಲಾಗಿದೆ.
ನವೆಂಬರ್ 21ರಂದು ಕೊರಟಗೆರೆ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದ ಅಂಗವಾಗಿ ಉಪಮುಖ್ಯಮಂತ್ರಿ ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ. ಪರಮೇಶ್ವರ್ ಅವರು ನೂತನ ರಸ್ತೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ನೇಗಲಾಲ ಗ್ರಾಮದ ಶ್ರೀ ಕಾವಲಮ್ಮ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳು ಹಾಗೂ ಸ್ಥಳೀಯ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ರಸ್ತೆ ನಿರ್ಮಿಸಲಾಗಿದೆ. ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ.
ಗ್ರಾಮೀಣ ಪ್ರದೇಶದ ಧಾರ್ಮಿಕ ಕ್ಷೇತ್ರಗಳಿಗೆ ಉತ್ತಮ ಸಂಪರ್ಕ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಈ ಕಾಮಗಾರಿ ಮಹತ್ವ ಪಡೆದಿದೆ. ನೂತನ ಸಿ.ಸಿ. ರಸ್ತೆಯಿಂದ ಮಳೆಗಾಲ ಸೇರಿದಂತೆ ಎಲ್ಲ ಕಾಲದಲ್ಲಿಯೂ ದೇವಾಲಯಕ್ಕೆ ತೆರಳುವ ಭಕ್ತರು ಮತ್ತು ಗ್ರಾಮಸ್ಥರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
