ಬೆಂಗಳೂರಿನಲ್ಲಿ 668 ಕೋಟಿ ರೂಪಾಯಿ ವೆಚ್ಚದಲ್ಲಿ ಕಮಾಂಡ್ ಸೆಂಟರ್ ನಿರ್ಮಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂಥ ಸೌಲಭ್ಯಗಳು ಜನರಿಗೆ ತಲುಪಿದಾಗ, ಉಪಯೋಗಕ್ಕೆ ಬಂದಾಗ ಮಾತ್ರ ಸಾರ್ಥಕವಾಗುತ್ತದೆ ಎಂದರು. ನಿರೀಕ್ಷಿತ ಫಲ ಸಿಕ್ಕದೇ ಹೋದರೆ ಕಷ್ಟ. ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ, ಮಹಿಳೆಯರ ಮೇಲೆ ದೌರ್ಜನ್ಯ, ಒಂಟಿ ಮನೆಗಳಿರುವಲ್ಲಿ, ವೃದ್ಧರು ಒಂಟಿಯಾಗಿರುವಲ್ಲಿ ಹೆಚ್ಚಿನ ಗಮನ ನೀಡಬೇಕು ಎಂದು ತಿಳಿಸಿದರು.
ಅಪರಾಧವಾದ ನಂತರ ಶಿಕ್ಷೆ ಕೊಡುವುದು ಒಂದು ಭಾಗ. ಆದರೆ ಅಪರಾಧಗಳು ನಡೆಯದ ರೀತಿ ತಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮಾಡಬೇಕು. ಪೋಲಿಸರು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಬೆಂಗಳೂರು ನಗರದಲ್ಲಿ ಮೊದಲ ಬಾರಿ ಕಮಾಂಡ್ ಸೆಂಟರ್ ಸ್ತಾಪನೆಯಾಗಿದ್ದು, ಅವಶ್ಯಕತೆ ಇರುವವರಿಗೆ ಇದರ ಪ್ರಯೋಜನ ದೊರಕಲಿ ಎಂದು ಹೇಳಿದರು.
ಬೆಂಗಳೂರಿನಲ್ಲಿ ಸರಗಳ್ಳತನ ಹಾಗೂ ಮಹಿಳೆಯರ ಮೇಲೆನ ದೌರ್ಜನ್ಯ ಹೆಚ್ಚಾಗಿದೆ ಹಾಗೂ ಕೊಲೆಗಳೂ ಕೂಡ ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂಥ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿರ್ಭಯಾ ನಿಧಿಯಡಿ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ ನಿರ್ಮಾಣವಾಗಿದೆ. ಹೆಚ್ಚೆಚ್ಚು ಇದರ ಸದುಪಯೋಗವಾಗುವಂತಾಗಬೇಕು ಎಂದು ಹೇಳಿದರು.


