ದೇಶದ ಅತಿ ದೊಡ್ಡ ಮಸೀದಿ ನಿರ್ಮಾಣಕ್ಕೆ ಅಯೋಧ್ಯೆ ವೇದಿಕೆಯಾಗಲಿದೆ. ಮೊಹಮ್ಮದ್ ಬಿನ್ ಅಬ್ದುಲ್ಲಾ ಮಸೀದಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮತ್ತು ಮುಂಬೈ ಮೂಲದ ಬಿಜೆಪಿ ಮುಖಂಡ ಹಾಜಿ ಅರಾಫತ್ ಶೇಖ್, ಅಯೋಧ್ಯೆಯಿಂದ 25 ಕಿ.ಮೀ. ದೂರದಲ್ಲಿರುವ ಧನಿಪುರದಲ್ಲಿ ಈ ಮಸೀದಿಯನ್ನು ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.
2024ರಲ್ಲಿ ಕಟ್ಟಡದ ಶಂಕುಸ್ಥಾಪನೆ ನಡೆಯಲಿದೆ ಎಂದು ತಿಳಿದು ಬಂದಿದೆ. 21 ಅಡಿ ಎತ್ತರ ಹಾಗೂ 36 ಅಡಿ ಅಗಲದಲ್ಲಿ 9 ಸಾವಿರ ಮಂದಿ ಏಕಕಾಲಕ್ಕೆ ಪ್ರಾರ್ಥನೆ ಸಲ್ಲಿಸಲು ಅನುಕೂಲವಾಗುವಂತೆ ಮಸೀದಿ ನಿರ್ಮಿಸಲಾಗುವುದು ಎಂದು ವರದಿಯಾಗಿದೆ.


