ಬೆಂಗಳೂರು: ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮ್ಯೂಸಿಯಂ ಹಾಗೂ ದೇಶದಲ್ಲೇ ಎತ್ತರವಾದ ಅಂಬೇಡ್ಕರ್ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿರುವುದು ಸ್ವಾಗತರ್ಹ ಎಂದು ಕಾಂಚಘಟ್ಟ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಸ್ಥಾಪನೆ ಮಾಡುವುದು ಹಾಗೂ ಆಂಧ್ರದ ವಿಜಯವಾಡದಲ್ಲಿ ದೇಶ ಹಾಗೂ ವಿಶ್ವದ ಅತಿ ದೊಡ್ಡ ಅಂಬೇಡ್ಕರ್ ಪ್ರತಿಮೆಯಾಗಿದ್ದು ಆ ಪ್ರತಿಮೆ ಒಟ್ಟು ಎತ್ತರ 206 ಅಡಿಯಾಗಿದ್ದು, ಈಗ ಕರ್ನಾಟಕದಲ್ಲಿ ಇದಕ್ಕಿಂತ ಹೆಚ್ಚು ಎತ್ತರದ ಪ್ರತಿಮೆ ನಿರ್ಮಾಣ ಸ್ವಾಗತರ್ಹ ಎಂದರು.
ಕರ್ನಾಟಕ ಭೀಮಸೇನೆ ತಾಲೂಕು ಅಧ್ಯಕ್ಷ ಮಂಜುನಾಥ್ ಆಂಜಿನಪ್ಪ ಮಾತನಾಡಿ , ಆಂಧ್ರದ ಮಾದರಿಯಲ್ಲೇ ಬೆಂಗಳೂರಲ್ಲಿ ಅಂಬೇಡ್ಕರ್ ಮ್ಯೂಸಿಯಂ ನಿರ್ಮಾಣಕ್ಕೆ ಪಣ ತೊಟ್ಟಿರುವ ಮುಖ್ಯಮಂತ್ರಿ ಗಳಿಗೆ ಅಭಿನಂದನೆಗಳು. ಈ ಕಾರ್ಯದಲ್ಲಿ ರಾಜ್ಯಾದ್ಯಂತ ಕರ್ನಾಟಕ ಭೀಮಸೇನಾನಿಗಳು ಪ್ರತಿ ಜಿಲ್ಲಾವಾರು ಜಿಲ್ಲಾಧಿಕಾರಿಗಳಿಗೆ ರಾಜ್ಯದಲ್ಲಿ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಈಗಾಗಲೇ ಹೋರಾಟ ನಡೆಸಿದ ಫಲವಾಗಿ ಮುಖ್ಯಮಂತ್ರಿಗಳು ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದಂದೆ ಪ್ರತಿಮೆ ನಿರ್ಮಾಣ ಘೋಷಣೆ ಮಾಡಿರುವುದು ಖುಷಿಯ ವಿಚಾರವೆಂದರು.
ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಸ್ತಿಹಳ್ಳಿ ರಾಜಣ್ಣ, ಕರ್ನಾಟಕ ಭೀಮಸೇನೆಯ ಗೌರವಾಧ್ಯಕ್ಷ ರೇಣುಕ್ ಮೂರ್ತಿ, ಕಾರ್ಯದರ್ಶಿ ಮೋಹನ್ ಕುಮಾರ್, ಡಾ.ಪುನೀತ್ ರಾಜಕುಮಾರ್, ಜನಸೇವಾ ಟ್ರಸ್ಟ್ ಅಧ್ಯಕ್ಷ ಎಸ್.ಜಗದೀಶ್, ಕರ್ನಾಟಕ ಭೀಮಸೇನೆಯ ಬಾಲಾಜಿ ಸುಮಂತ್ ಮೊದಲಾದವರು ಹಾಜರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW