ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ಬಾಲಕರ ಸರ್ಕಾರಿ ವಸತಿ ಶಾಲೆಯಲ್ಲಿ ವಿಷಹಾರ ಸೇವಿಸಿ 14 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳನ್ನು ಶಿರಾ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ , ಚಿಕಿತ್ಸೆ ನೀಡಲಾಗುತ್ತಿದೆ.
ವಸತಿ ಶಾಲೆಯಲ್ಲಿ ನಿನ್ನೆ ರಾತ್ರಿ ಚಿಕನ್ ಅನ್ನು ಮಕ್ಕಳಿಗೆ ನೀಡಲಾಗಿತ್ತು. ನಂತರ ಇಂದು ಬೆಳಗ್ಗೆ ತಿಂಡಿ ತಿಂದ ತಕ್ಷಣ ವಿದ್ಯಾರ್ಥಿಗಳು ವಾಂತಿ ಭೇದಿಯಿಂದ ಬಳಲತೊಡಗಿದರು.
ತಕ್ಷಣ ಅವರೆಲ್ಲರನ್ನು ಶಿರಾ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಪ್ರಾಥಮಿಕ ಚಿಕಿತ್ಸೆ ಕೊಡಲಾಗುತ್ತಿದೆ.
ವೈದ್ಯಕೀಯ ಮೂಲಗಳ ಪ್ರಕಾರ ರಾತ್ರಿ ಸೇವಿಸಿದ ಮಾಂಸಹಾರ ಒಂದು ರೀತಿ ವಿಷಾಹಾರವಾಗಿರ ಬಹುದು ಎಂದು ಅಂದಾಜಿಸಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4