ಬೆಂಗಳೂರು: ನೆಲಮಂಗಲದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 6 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಕಾರ್‌ನ ಮೇಲೆ ಕಂಟೇನರ್ ಲಾರಿ ಉರುಳಿ ಬಿದ್ದ ಪರಿಣಾಮ ಈ ಅಪಘಾತ ಸಂಭವಿಸಿದೆ.
ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ.
ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. ಡಿಕ್ಕಿ ರಭಸಕ್ಕೆ ಪಲ್ಟಿಯಾಗಿ ಕಾರಿನ ಮೇಲೆ ಕಂಟೇನರ್ ಬಿದ್ದಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮಗು ಸೇರಿ ಒಟ್ಟು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಿಂದಾಗಿ ತುಮಕೂರು ಬೆಂಗಳೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx