ದಾವಣಗೆರೆ: ದಾವಣಗೆರೆಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ ಸಂಬಂಧ ಅಸ್ವಸ್ಥರಾದವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈವರೆಗೆ 52 ಜನರು ತೀವ್ರ ಅಸ್ವಸ್ಥತೆಯಿಂದ ವಿವಿಧ ಆಸ್ಪತ್ರೆಗೆಗಳಿಗೆ ದಾಖಲಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡವರ ಸಂಖ್ಯೆ ಹೆಚ್ಚಿದ್ದು, ವಾಂತಿ-ಬೇಧಿಯಿಂದ ಜನರು ಬಳಲುತ್ತಿದ್ದಾರೆ.
52 ಜನರನ್ನು ಚನ್ನಗಿರಿ, ಭದ್ರಾವತಿ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ಜೋಳದಾಳ್ ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದಾರೆ. ಸಧ್ಯ ಯಾವುದೇ ಪ್ರಾಣಾಪಾಯವಿಲ್ಲ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q