ಮಲ್ಲಸಂದ್ರ ಪೈಪ್ ಲೈನ್ ರಸ್ತೆಯ ಪಾರ್ಕ್ ಪಕ್ಕದ ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳನ್ನು ದಾಸರಹಳ್ಳಿ ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಬೀದಿ ಬದಿ ವ್ಯಾಪಾರಿಗಳು ಮತ್ತೆ ಪಾದಚಾರಿ ಮಾರ್ಗದಲ್ಲೇ ವಹಿವಾಟು ಆರಂಭಿಸಿದ್ದಾರೆ.
ಬೀದಿಬದಿ ವ್ಯಾಪಾರಿಗಳಿಗೆ ನಿಗದಿತ ಸ್ಥಳ ಗುರುತಿಸದ ಕಾರಣ ಮಲ್ಲಸಂದ್ರ ವೃತ್ತದಿಂದ ಕೆಂಪೇಗೌಡ ವೃತ್ತದವರೆಗೂ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ವ್ಯಾಪಾರ ಮಾಡಲು ಬರುವ ಜನರು ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುತ್ತಿದ್ದುದರಿಂದ ಬೇರೆ ವಾಹನ ಸವಾರರಿಗೆ ತೊಂದರೆಯುಂಟಾಗಿತ್ತು.
ಈ ಬಗ್ಗೆ ದೂರುಗಳು ಬಂದಿದ್ದರಿಂದ ಬೀದಿ ಬದಿ ವ್ಯಾಪಾರಿಗಳ ವಿರೋಧದ ನಡುವೆಯೇ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದ್ದರು. ಈಗ ಮತ್ತೆ ಬೀದಿ ಬದಿಯಲ್ಲೇ ವ್ಯಾಪಾರ ನಡೆಸುತ್ತಿದ್ದರೂ ಅಧಿಕಾರಿಗಳು ಗಮನ ಹರಿಸಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
‘ವಾಹನ ಸವಾರರು ವ್ಯಾಪಾರಿಗಳ ಎದುರಿನ ರಸ್ತೆಗೆ ಗಾಡಿ ನಿಲ್ಲಿಸಿ ತರಕಾರಿ ಖರೀದಿಸುತ್ತಾರೆ. ಈ ವೇಳೆ ಹಿಂದೆಯಿಂದ ಬರುವ ವಾಹನಗಳಿಗೆ ಕಿರಿಕಿರಿಯಾಗಿ ಸಂಚಾರ ದಟ್ಟಣೆಯಾಗುತ್ತದೆ. ಇದನ್ನು ನೋಡಿದರೂ ಕೂಡ ಅಧಿಕಾರಿಗಳು ವ್ಯಾಪಾರಿಗಳನ್ನು ತೆರೆವುಗೊಳಿಸಲು ಮುಂದಾಗುತ್ತಿಲ್ಲ’ ಎಂದು ಸ್ಥಳೀಯರು ದೂರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


