ಮುಂಬೈ: ಮಗಳ ಮೇಲೆಯೇ ಪಾಪಿ ತಂದೆಯೊಬ್ಬ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ಮುಂಬೈನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 46 ವರ್ಷದ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
17 ವರ್ಷದ ಸಂತ್ರಸ್ತೆ ಇತ್ತೀಚೆಗೆ ನಾಪತ್ತೆಯಾಗಿದ್ದು, ಆಕೆಯನ್ನು ಅಪಹರಿಸಲಾಗಿದೆ ಎಂದು ತಂದೆ ತಾರ್ಡಿಯೊ ಪೊಲೀಸ್ ಠಾಣೆಗೆ ದೂರು ನೀಡಿದ್ದನು. ಹೀಗಾಗಿ ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದರು.
ಪಶ್ಚಿಮ ರೈಲ್ವೆ ನೆಟ್‌ವರ್ಕ್‌ನಲ್ಲಿ ಮಹಾಲಕ್ಷಿ ನಿಲ್ದಾಣದಲ್ಲಿ ನಾಪತ್ತೆಯಾಗಿದ್ದ ನೊಂದ ಬಾಲಕಿ ಪತ್ತೆಯಾಗಿದ್ದಾಳೆ. ಈ ವೇಳೆ ಕ್ರೈಂ ಬ್ರಾಂಚ್ ಕಛೇರಿಗೆ ಬಾಲಕಿಯನ್ನು ಕರೆದೊಯ್ದು ವಿಚಾರಿಸಿದ ವೇಳೆ, ತಂದೆಯ ನಿರಂತರ ಲೈಂಗಿಕ ದೌರ್ಜನ್ಯದಿಂದ ಬೇಸತ್ತು ತಾನು ಮನೆ ಬಿಟ್ಟು ಹೋಗಿರುವುದಾಗಿ ಬಾಲಕಿ ಹೇಳಿಕೊಂಡಿದ್ದಾಳೆ.
ಕಳೆದ 5 ವರ್ಷಗಳಿಂದಲೂ ತಂದೆ ನಿರಂತರವಾಗಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾನೆ ಎಂದು ಬಾಲಕಿ ಹೇಳಿದ್ದಾಳೆ. ಬಾಲಕಿಯ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು ಬಿಎನ್‌ಎಸ್ ಮತ್ತು ಪೋಕ್ಸೋ ಕಾಯ್ದೆಯಡಿ ಅತ್ಯಾಚಾರ ಮತ್ತು ಇತರ ಅಪರಾಧಗಳ ಪ್ರಕರಣಗಳನ್ನು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296