ಸರಗೂರು: ಎನ್.ಕೆ.ರಾಜಣ್ಣರವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರಂತರವಾಗಿ ನಾವುಗಳು ಹೋರಾಟ ಮಾಡುತ್ತೇವೆ ಎಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ಧಿ ಸಂಘದ ಎಂ.ರಾಮಚಂದ್ರ ಹೇಳಿದರು.
ಪಟ್ಟಣದಲ್ಲಿ ಪ್ರವಾಸಿ ಮಂದಿರದಲ್ಲಿ ಗುರುವಾರದಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ಧಿ ಸಂಘದ ಸಮಿತಿ ನೇತೃತ್ವದಲ್ಲಿ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಎನ್.ಕೆ.ರಾಜಣ್ಣ ಹಾಗೂ ನಾಗೇಂದ್ರರವರನ್ನು ಸಂಪುಟದಿಂದ ವಜಾಗೊಳಿಸಿರವುದನ್ನು ಖಂಡಿಸಿ ಆ.29 ರಂದು ಮೈಸೂರು ಮತ್ತು ಚಾಮರಾಜನಗರ ನಾಯಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿ ತಾಲೂಕುಗಳಿಗೆ ಭೇಟಿ ಕೊಟ್ಟು ನಮ್ಮ ಸಮಾಜದ ಬಂಧುಗಳಿಗೆ ಆಹ್ವಾನ ಪತ್ರಿಕೆ ನೀಡಿ ಈ ಬೃಹತ್ ಪತ್ರಿಭಟನೆಗೆ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಕರಪತ್ರ ಹಂಚಿ ಹೆಚ್ಚಿನ ಜನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಪ್ರತಿಭಟನೆಯಲ್ಲಿ ಮೈಸೂರಿನ ಟೌನ್ ಹಾಲ್ ಬಳಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಪ್ರತಿಭಟನೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ನಾಯಕ ಸಮಾಜದ ಮುಖಂಡರು ಭಾಗವಹಿಸುತ್ತಿದ್ದಾರೆ. ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಪತ್ರಿಭಟನೆ ನಡೆಸಿ ಎನ್.ಕೆ.ರಾಜಣ್ಣರವರ ಸಚಿವ ಸ್ಥಾನದಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಎಲ್ಲಾ ತಾಲೂಕಿನ ನಾಯಕ ಸಂಘ ಹಾಗೂ ಸಂಘ ಸಂಸ್ಥೆಗಳ ಜೊತೆಗೂಡಿ ಈ ಅನ್ಯಾಯವನ್ನು ಖಂಡಿಸುತ್ತೆವೆ. ರಾಜಣ್ಣವರಿಗೆ ಅನ್ಯಾಯಲ್ಲ ಇಡೀ ಸಮಾಜಕ್ಕೆ ಅನ್ಯಾಯ ಮಾಡಿರುವ ಈ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಉಪಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ಕೆಂಪನಾಯಕ, ಅಣ್ಣಯ್ಯ ನಾಯಕ, ಶ್ರೀ ಮಹರ್ಷಿ ವಾಲ್ಮೀಕಿ ಗುರುಕುಲ ಸೇವಾ ಟ್ರಸ್ಟ್ ನ ಅಧ್ಯಕ್ಷ ಪು. ಶ್ರೀನಿವಾಸನಾಯಕ, ಪ್ರಧಾನ ಕಾರ್ಯದರ್ಶಿ ದ್ಯಾವಪ್ಪನಾಯಕ, ಸಹ ಕಾರ್ಯದರ್ಶಿ ಪ್ರಭಾಕರ ಹುಣಸೂರು, ಮೈಸೂರು ತಾಲ್ಲೂಕು ಅಧ್ಯಕ್ಷ ಮಹಾದೇವ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಕಡಕೊಳ ಕುಮಾರಸ್ವಾಮಿ, ನಾಯಕರ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ಮಹಾದೇವ ನಾಯಕ, ವಿನೋದ್, ಸುರೇಶ್, ಪಪಂ ಸದಸ್ಯ ಶ್ರೀನಿವಾಸ, ತಾಲೂಕು ನಾಯಕ ಸಮಾಜದ ಅಧ್ಯಕ್ಷ ಪುರದಕಟ್ಟೆ ಬಸವರಾಜು, ಯಜಮಾನರು ಬೆಟ್ಟನಾಯಕ, ಕೆಇಬಿ ಶಿವಣ್ಣ,ಮುಖಂಡರು ಶಂಭುಲಿಂಗನಾಯಕ, ನವೀನ್ ಕುಮಾರ್, ಚನ್ನಪ್ಪನಾಯಕ, ನಾಗಣ್ಣ, ರವಿಕುಮಾರ್, ರಮೇಶ್ ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC