ಸರಗೂರು: ತಾಲೂಕಿನ ಹಂಚೀಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ಮಸಹಳ್ಳಿ ಸೂರ್ಯ ಕುಮಾರ್ ಸಂವಿಧಾನ ಪೀಠಿಕೆಯನ್ನು ಶಾಸಕ ಅನಿಲ್ ಚಿಕ್ಕಮಾದು ಸಮ್ಮುಖದಲ್ಲಿ ಪಂಚಾಯಿತಿ ಅಧಿಕಾರಿಗಳಿಗೆ ಕೊಡುಗೆ ನೀಡಿದರು.
ನಂತರ ಮಾತನಾಡಿದ ಮಸಹಳ್ಳಿ ಸೂರ್ಯ ಕುಮಾರ್, ಭಾರತದ ಸಂವಿಧಾನದ ಕುರಿತು ಗ್ರಾಮೀಣ ಪ್ರದೇಶಗಳಲ್ಲೂ ಅರಿವು ಮೂಡಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿಗೆ ಗ್ರಂಥಾಲಯಗಳಿಗೆ ಸಂವಿಧಾನದ ಪ್ರತಿಯನ್ನು ಪೂರೈಸಲಾಗುವುದು ಎಂದು ತಿಳಿಸಿದರು.
‘ಗ್ರಾಮೀಣ ಪ್ರದೇಶದ ಜನರು ಅಲ್ಲಿನ ಗ್ರಂಥಾಲಯಗಳಲ್ಲಿ ಸಂವಿಧಾನ ಓದಲು ಅವಕಾಶ ಕಲ್ಪಿಸಲಾಗುವುದು’ ಎಂದರು.
ನಂತರ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಸಂವಿಧಾನದ ಪ್ರತಿಗಳ ಜತೆಯಲ್ಲೇ ಸ್ಥಳೀಯ ಸಂಸ್ಥೆಗಳ ರಚನೆಯ ಮೂಲಕ ಆಡಳಿತ ವಿಕೇಂದ್ರೀಕರಣಕ್ಕೆ ಅವಕಾಶ ಕಲ್ಪಿಸಿದ ಸಂವಿಧಾನದ 73 ಮತ್ತು 74ನೇತಿದ್ದುಪಡಿಗಳಿಗೆ ಸಂಬಂಧಿಸಿದ ಗ್ರಂಥಗಳನ್ನೂ ಗ್ರಾಮೀಣ ಪ್ರದೇಶಗಳ ಗ್ರಂಥಾಲಯಗಳಿಗೆ ಒದಗಿಸಲಾಗುವುದು ಎಂದರು.
ಅಂಬೇಡ್ಕರ್ ನೇತೃತ್ವದ ಸಂವಿಧಾನ ರಚನಾ ಸಮಿತಿಯು ಜಗತ್ತಿನ ಹಲವು ರಾಷ್ಟ್ರಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ದೇಶಕ್ಕೆ ಅತ್ಯುತ್ತಮ ಮತ್ತು ಬಲಿಷ್ಠವಾದ ಸಂವಿಧಾನವನ್ನು ನೀಡಿದೆ. ಸಂವಿಧಾನದ ಬಲದಿಂದಲೇ ದೇಶವು 79 ವರ್ಷಗಳ ಕಾಲ ಉತ್ತಮವಾಗಿ ನಡೆದುಕೊಂಡು ಬಂದಿದೆ. ದೇಶದಲ್ಲಿ ಕಾನೂನು ಪಾಲನೆ ಅತ್ಯುತ್ತಮವಾಗಿರುವುದಕ್ಕೂ ಇದೇ ಕಾರಣ ಎಂದರು.
ದೇಶದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಪತ್ರಿಕಾರಂಗ ಎಲ್ಲವೂ ಸಂವಿಧಾನದ ಆಶಯದಂತೆ ಸಾಗುತ್ತಿವೆ. ಸಂವಿಧಾನದ ಕಾರಣದಿಂದ ಸಾಮಾಜಿಕ ಮತ್ತು ರಾಜಕೀಯ ವಿಕೇಂದ್ರೀಕರಣ ಸಾಧ್ಯವಾಗಿದೆ. ಆರ್ಥಿಕ ವಿಕೇಂದ್ರೀಕರಣ ಇನ್ನಷ್ಟು ಆಗಬೇಕಿದೆ ಎಂದರು.
ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಪುಟ್ಟಯ್ಯ, ಉಪಾಧ್ಯಕ್ಷ ನಟರಾಜು, ಮುಖಂಡರು, ಪುಟ್ಟಯ್ಯ,ನಾಗಣ್ಣ, ಬಸವಣ್ಣ,ವೈರುಮುಡಿ,ಗ್ರಾಮೀಣ ಮಹೇಶ್,ಕಳಸೂರು ಬಸವರಾಜು, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


