ತುಮಕೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ, ಕಾಂಗ್ರೆಸ್ ಪಕ್ಷದಿಂದ ಕುಕ್ಕರ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕ್ರಮಕ್ಕೆ ಒತ್ತಾಯಿಸಿ ಚುನಾವಣಾ ಆಯೋಗಕ್ಕೇ ಪತ್ರ ಬರೆಯಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಡಾಕ್ಟರ್ ಮಂಜುನಾಥ ತಿಳಿಸಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ಕೂಡ ದಾಖಲಾಗಿದ್ದು ಸಾಕಷ್ಟು ಪ್ರಚಾರವನ್ನು ಕೂಡ ಮಾಧ್ಯಮಗಳೇ ನೀಡಿವೆ ಎಂದು ಹೇಳಿದರು. ಚುನಾವಣಾ ಆಯೋಗ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಇವತ್ತು ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದೇನೆ. ನಾಳೆ ಸಂಜೆ ಚನ್ನಪಟ್ಟಣದಲ್ಲಿ ಕಾರ್ಯಕ್ರಮ ಇದೆ. ಕಾರ್ಯಕ್ರಮಕ್ಕೆ ಅಮಿತ್ ಷಾ ಆಗಮಿಸಲಿದ್ದಾರೆ ಎಂದರು.
ನಾನು 4 ರಂದು ಗುರುವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ಎರಡು ಪಕ್ಷದ ಮುಖಂಡರು ಅಭಿಮಾನಿಗಳು, ಹಿತೈಷಿಗಳು ಬೆಂಬಲಿಗರು ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಲಿದ್ದಾರೆ. ರ್ಯಾಲಿ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296