ನವದೆಹಲಿ: ಅಡುಗೆ ಎಣ್ಣೆ(Cooking Oil)ಗಳ ಚಿಲ್ಲರೆ ಬೆಲೆಗಳನ್ನು ಕಡಿಮೆ ಮಾಡುವ ಮತ್ತು ದೇಶೀಯ ಸಂಸ್ಕರಣಾಗಾರಗಳನ್ನು ರಕ್ಷಿಸುವ ಗುರಿ ಹೊಂದಿರುವ ಕೇಂದ್ರವು ಶುಕ್ರವಾರ ಕಚ್ಚಾ ಪಾಮ್ ಎಣ್ಣೆ, ಕಚ್ಚಾ ಸೋಯಾಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆಯ ಮೇಲಿನ ಮೂಲ ಕಸ್ಟಮ್ ಸುಂಕವನ್ನು ಶೇ. 10 ಕ್ಕೆ ಇಳಿಕೆ ಮಾಡಿದೆ.
ಈ ಮೂರು ಕಚ್ಚಾ ಖಾದ್ಯ ತೈಲಗಳ ಮೇಲಿನ ಸುಂಕವು ಶೇ. 20 ರಷ್ಟಿತ್ತು. ಅದನ್ನೀಗ ಸರ್ಕಾರ ಶೇ 10ರಷ್ಟು ಇಳಿಕೆ ಮಾಡಿದೆ. ಹೀಗಾಗಿ ಅಡುಗೆ ಎಣ್ಣೆ ಬೆಲೆಗಳಲ್ಲಿ ಇಳಿಕೆ ಆಗುವ ಸಾಧ್ಯತೆಗಳಿವೆ. ಭಾರತವು ತನ್ನ ದೇಶೀಯ ಖಾದ್ಯ ತೈಲದ ಅಗತ್ಯದ ಶೇ. 50 ಕ್ಕಿಂತ ಹೆಚ್ಚು ಆಮದು ಮಾಡಿಕೊಳ್ಳುತ್ತದೆ.
2023-24 ರ ತೈಲ ಮಾರುಕಟ್ಟೆ ವರ್ಷದಲ್ಲಿ (ನವೆಂಬರ್ ನಿಂದ ಅಕ್ಟೋಬರ್ ವರೆಗೆ) ಭಾರತವು 159.6 ಲಕ್ಷ ಟನ್ ಖಾದ್ಯ ತೈಲಗಳನ್ನು ಆಮದು ಮಾಡಿಕೊಂಡಿದ್ದು, ಇದರ ಮೌಲ್ಯ ಸುಮಾರು 1.32 ಲಕ್ಷ ಕೋಟಿ ರೂಪಾಯಿ ಎಂಬುದು ಗಮನಾರ್ಹ. ಈ ಸಂಬಂಧ ಹಣಕಾಸು ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW