ಬ್ಯಾಚುಲರ್ ಪಾರ್ಟಿ ಸಿನಿಮಾದ ಹಾಡಿನಲ್ಲಿ ಕಾಪಿರೈಟ್ಸ್ ಉಲ್ಲಂಘನೆ ಕೇಸ್ ಗೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟ ಇಂದು ಯಶವಂತಪುರ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾದರು.
ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಪಿರೈಟ್ ಬಗ್ಗೆ ಇಂಡಸ್ಟ್ರಿಯಲ್ಲಿ ನಾಲೆಡ್ಜೇ ಇಲ್ಲ. ನನ್ನ ಪ್ರಕಾರ, ಕಾಪಿರೈಟ್ ಉಲ್ಲಂಘನೆ ಅಲ್ಲ. ಈ ಸಿನಿಮಾಗೂ ಮುನ್ನ ಆ ಹಾಡುಗಳನ್ನು ಬಳಸಲು ಅನುಮತಿಗಾಗಿ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ಅವರ ಬಳಿ ಮಾತನಾಡಿದಾಗ, ಹೆಚ್ಚಿನ ಮೊತ್ತ ಕೇಳಿದ್ದರು. ಅಷ್ಟು ದೊಡ್ಡ ಅಮೌಂಟ್ ಕೊಡೋಕೆ ನಮಗೆ ಸರಿ ಎನಿಸಲಿಲ್ಲ. ಆಮೇಲೆ ಅವರು ಹೇಳ್ತೀವಿ ಅಂತ ಆ ಮಾತುಕತೆ ಅಲ್ಲೇ ನಿಂತು ಹೋಯಿತು. ಈ ಸಿನಿಮಾದ ರಿಲೀಸ್ ನಂತರ ಅವರು ಕೇಸ್ ಹಾಕಿದ್ದಾರೆ ಎಂದು ವಿವರಿಸಿದರು.
ಇದು ಕಾಪಿರೈಟ್ ಉಲ್ಲಂಘನೆ ಅಲ್ಲ. ಕನ್ನಡದ ಹಾಡನ್ನು ಕನ್ನಡ ಚಿತ್ರದಲ್ಲಿ ಬಳಕೆ ಮಾಡುವಂತೆಯೇ ಇಲ್ವಾ ಎಂದು ನಟ ಪ್ರಶ್ನಿಸಿದ್ದಾರೆ. ಕೊಟ್ಟಿರುವ ಕಂಪ್ಲೆಂಟ್‌ಗೆ ನಾನು ಕೂಡ ಕೋರ್ಟ್‌ನಲ್ಲಿ ಫೈಟ್ ಮಾಡ್ತೀನಿ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296